UPSC CMS Admit Card 2024: ಕೇಂದ್ರ ಲೋಕಸೇವಾ ಆಯೋಗಯವು (UPSC) ಸಂಯೋಜಿತ ವೈದ್ಯಕೀಯ ಅಧಿಕಾರಿಗಳ(CMS) ನೇಮಕಾತಿಗೆ ಪರೀಕ್ಷೆ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು (Admit card) ಬಿಡುಗಡೆ ಮಾಡಲಾಗಿದೆ. ಒಟ್ಟು 827 ಹುದ್ದೆಗಳಿಗೆ ಪರೀಕ್ಷೆಯು ನಡೆಯುತ್ತಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಈ ಪರೀಕ್ಷೆಯು ಜುಲೈ 14, 2024 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಪರೀಕ್ಷಾ ಸಮಯ ಆಗುವ 30 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
UPSC ತನ್ನ ಅಧಿಕೃತ ವೆಬ್ ಸೈಟಿನಲ್ಲಿ CMS ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರದ PDF ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಅನುಸರಿಸಬೇಕಾದ ಸೂಚನೆಗಳನ್ನು ನೀಡಿದ್ದು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಎಲ್ಲ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. UPSC ಅಧಿಕೃತ ವೆಬ್ ಸೈಟ್ https://upsc.gov.in ನಲ್ಲಿ ಪ್ರವೇಶ ಪತ್ರ ಲಭ್ಯವಿದೆ. ಈ ಲೇಖನದಲ್ಲಿ ನಾವು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.