ಭಾರತೀಯ ಸಿವಿಲ್ ಸೇವೆಗಳ (UPSC) ಪರೀಕ್ಷೆಯ ಪ್ರಾಥಮಿಕ ಹಂತದ ಅಡ್ಮಿಟ್ ಕಾರ್ಡ್‌ಗಳನ್ನು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಇಂದು ಬಿಡುಗಡೆ ಮಾಡಿದೆ.ಈ ವರ್ಷದ UPSC ಸಿವಿಲ್ ಸೇವೆಗಳ ಪ್ರಾಥಮಿಕ ಪರೀಕ್ಷೆಯನ್ನು ಜೂನ್ 16, 2024 ರಂದು ನಡೆಸಲಾಗುವುದು. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ ಹಾಗೂ ಅರ್ಜಿ ಸಂಖ್ಯೆಯನ್ನು ನಮೂದಿಸಿ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿಕೊಂಡು ತಮ್ಮ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಗಳು ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿರುತ್ತದೆ. ಈ ಲೇಖನದಲ್ಲಿ UPSC CSE ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದೆ.