UPSC CSE Mains Admit Card 2024: ಭಾರತೀಯ ಸಿವಿಲ್ ಸೇವೆಗಳ ಪರೀಕ್ಷೆ (UPSC) 2024 ರ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಸಾಮಾನ್ಯವಾಗಿ ಪರೀಕ್ಷೆಯ 15 ದಿನಗಳ ಮೊದಲು ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತದೆ. ಮುಖ್ಯ ಪರೀಕ್ಷೆ 2024 ಸೆಪ್ಟೆಂಬರ್ 20 ರಂದು ನಡೆಯಲಿದ್ದು, ಈಗಾಗಲೇ ಜೂನ್ 7 ರಂದು ಪ್ರಾಥಮಿಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳ ಬಹುದು.
ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಮೂಲಕ ಲಾಗಿನ್ ಮಾಡುವ ಮೂಲಕ ಅಡ್ಮಿಟ್ ಕಾರ್ಡ್ ಪಡೆದುಕೊಳ್ಳಬಹುದು. ಪರೀಕ್ಷಾ ದಿನಾಂಕ ಮತ್ತು ಸಮಯ, ಪರೀಕ್ಷ ಕೇಂದ್ರದಗಳ ಕುರಿತು ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿರುತ್ತದೆ. UPSCಯ ಅಧಿಕೃತ ವೆಬ್ ಸೈಟಿನಲ್ಲಿ https://upsc.gov.in ಪರೀಕ್ಷೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತದೆ. ಈ ಲೇಖನದಲ್ಲಿ ನಾವು ಆನ್ ಲೈನ್ ಮೂಲಕ UPSC CSE ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.