ಕೇಂದ್ರ ಲೋಕಸೇವಾ ಆಯೋಗವು (UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2026ಗೆ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಎಇಇ (ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್) ಸೇರಿದಂತೆ ಒಟ್ಟು 474 ಎಂಜಿನಿಯರಿಂಗ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸದರಿ ಪರೀಕ್ಷೆಯ ಮೂಲಕ ಭರ್ತಿ ಮಾಡಿಮಾಡಿಕೊಳ್ಳಲಾಗುತ್ತದೆ. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಅಧಿಕೃತ ಜಾಲತಾಣ https://upsconline.nic.in/ನಲ್ಲಿ ಅ.16ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಸೆಪ್ಟೆಂಬರ್ 26, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 16, 2025 ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಜಿನಿಯರಿಂಗ್ ಪದವಿ ಯನ್ನು ಪೂರ್ಣಗೊಳಿಸಬೇಕು.
ವಯೋಮಿತಿ: 01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು ವಯೋಮಿತಿ ಸಡಿಲಿಕೆ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಓಬಿಸಿ ಅಭ್ಯರ್ಥಿಗಳಿಗೆ – 3 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ: ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಸಂದರ್ಶನ ದಾಖಲಾತಿ ಪರಿಶೀಲನೆ ಅಂತಿಮ ಆಯ್ಕೆ ಸಂಬಳ: ಅರ್ಹ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪ್ರಕಾರ ನಿಗದಿತ ದರದಲ್ಲಿ ಮಾಹೆಯಾನ ವೇತನ ನೀಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಒದಗಿಸಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 200ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸುವುದು ಹೇಗೆ? • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಪ್ಪದೇ ವಿವರವಾದ ಅಧಿಸೂಚನೆಯನ್ನು ಓದಿ ಅರ್ಹತೆಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಂಡು ನಂತರ
• UPSC ಅಧಿಕೃತ ಜಾಲತಾಣ https://upsconline.nic.in/ ಕ್ಕೆ ಭೇಟಿ ನೀಡಿ.
Upsc Online Portal • ಅರ್ಜಿದಾರರು ಖಾತೆಯನ್ನು ರಚಿಸಿ ಅಥವಾ ಈಗಾಗಲೇ ಖಾತೆಯನ್ನು ಹೊಂದಿದ್ದರೆ ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಿ.
• ಲಾಗಿನ್ ಆದ ನಂತರ ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ, 2026 – ಅರ್ಜಿ ನಮೂನೆ ಆಯ್ಕೆ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links: Official Notification PDF Download Online Application Form Link Apply Now Official Website upsc.gov.in More Updates KarnatakaHelp.in