ಭಾರತೀಯ ಸಾರ್ವಜನಿಕ ಸೇವಾ ಆಯೋಗ (UPSC IES ISS Admit Card 2024) ಭಾರತೀಯ ಅರ್ಥಶಾಸ್ತ್ರ ಸೇವೆ (IES) ಮತ್ತು ಭಾರತೀಯ ಸಾಂಖ್ಯಿಕಿ ಸೇವೆ (ISS) ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗಳು ಇದೇ ಜೂನ್ 21 ರಿಂದ ಜೂನ್ 23, 2024 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು UPSC ಯ ಅಧಿಕೃತ ವೈಬ್ ಸೈಟ್ ನ upsconline.nic.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷೆಯ ಸಮಯ ಬಗೆಗಿನ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದ್ದು, ಪರೀಕ್ಷೆಗೆ ಹಾಜರಾಗಲು ಕಡ್ಡಾಯವಾಗಿರುತ್ತದೆ. ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗುವುದು.