UPSC ಎನ್‌ಡಿಎ-I 2026ರ ಲಿಖಿತ ಪರೀಕ್ಷೆಯ ಫಲಿತಾಂಶ ಘೋಷಣೆ

Published on:

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ(ಎನ್‌ಡಿಎ)-1ರ ಮೂಲಕ ಒಟ್ಟು 394 ಹುದ್ದೆಗಳ ಭರ್ತಿಗಾಗಿ ಏ.12ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ(ಮೇ 08) ಪ್ರಕಟಿಸಿದೆ.

ಎಸ್‌ಎಸ್‌ಬಿ ಸಂದರ್ಶನಕ್ಕೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಒಳಗೊಂಡ ಫಲಿತಾಂಶ ಪಟ್ಟಿಯನ್ನು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ http://www.upsc.gov.inನಲ್ಲಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದು.

UPSC – ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಸೇನಾ ವಿಭಾಗ, ನೌಕಾಪಡೆ, ವಾಯುಪಡೆ) ಗಳಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಹಾಗೂ ನೌಕಾ ಅಕಾಡೆಮಿಯ (10+2 ಕೆಡೆಟ್ ಪ್ರವೇಶ ಯೋಜನೆ) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 394 NDA-I ಹುದ್ದೆಗಳ ನೇಮಕಾತಿಗಾಗಿ ಏ.12ರಂದು ಯಶಸ್ವಿಯಾಗಿ ನಡೆಸಲಾದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು

ಅಭ್ಯರ್ಥಿಗಳು ಲಿಖಿತ ಫಲಿತಾಂಶ ಪ್ರಕಟವಾದ ಎರಡು ವಾರಗಳಲ್ಲಿ ಭಾರತೀಯ ಸೇನಾ ನೇಮಕಾತಿ ವೆಬ್‌ಸೈಟ್ joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬೇಕು ನಂತರ ಯಶಸ್ವಿ ಅಭ್ಯರ್ಥಿಗಳಿಗೆ ಆಯ್ಕೆ ಕೇಂದ್ರಗಳು ಮತ್ತು ಎಸ್‌ಎಸ್‌ಬಿ ಸಂದರ್ಶನದ ದಿನಾಂಕಗಳನ್ನು ನೋಂದಾಯಿತ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

UPSC NDA-I ಲಿಖಿತ ಪರೀಕ್ಷೆ ಫಲಿತಾಂಶ ಪರಿಶೀಲಿಸುವ ವಿಧಾನ

• ಯುಪಿಎಸ್ಸಿ ಅಧಿಕೃತ ವೆಬ್ಸೈಟ್ http://www.upsc.gov.inಗೆ ಭೇಟಿ ನೀಡಿ.

• ನಂತರ ಹೊಸದೇನಿದೆ ವಿಭಾಗದ ಕೆಳಗೆ ನೀಡಲಾಗಿರುವ “ಲಿಖಿತ ಫಲಿತಾಂಶ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I), 2026” – ಎಂಬ ಶೀರ್ಷಿಕೆಯ ಮೇಲೆ ಟ್ಯಾಪ್ ಮಾಡಿ.

• ನಂತರ *ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I), 2026* – “ಲಿಖಿತ ಫಲಿತಾಂಶ” ಪಿಡಿಎಫ್ ಮೇಲೆ ಕ್ಲಿಕ್ ಮಾಡಿ.

• ಲಿಖಿತ ಪರೀಕ್ಷೆಯ ಫಲಿತಾಂಶವೂ ಪಿಡಿಎಫ್ ರೂಪದಲ್ಲಿ ಕಾಣಿಸಿತ್ತದೆ.

• ಪಿಡಿಎಫ್ ನಲ್ಲಿ ರೋಲ್ ಸಂಖ್ಯೆಯ ಮೂಲಕ ನಿಮ್ಮ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ.

• ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

UPSC NDA 1 2026 Written Result PDFDownload
Official Websiteupsc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment