ಯುಪಿಎಸ್ಸಿ ಎನ್‌ಡಿಎ ಪರೀಕ್ಷೆ-IIರ ನೋಂದಣಿಗೆ ಅರ್ಜಿ ಆಹ್ವಾನ

ಸೆಪ್ಟೆಂಬರ್‌ 13ಕ್ಕೆ ಪರೀಕ್ಷೆ

Published on:

2026ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ-IIರ ನೋಂದಣಿಗಾಗಿ ಕೇಂದ್ರ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಸೇನಾಪಡೆಗೆ 208 ಸ್ಥಾನ, ನೌಕಾಪಡೆ 42 ಸ್ಥಾನ, ವಾಯುಪಡೆಗೆ 120 ಸ್ಥಾನ ಮತ್ತು ನೌಕಾ ಅಕಾಡೆಮಿ 10+2 ಕೆಡೆಟ್ ಪ್ರವೇಶ ಯೋಜನೆಗೆ 24 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂ.09ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsc.gov.in/ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 20, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 09, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 09, 2026

ಖಾಲಿ ಇರುವ ಹುದ್ದೆಗಳ ವಿವರ:

NDA ಸೇನಾ ವಿಭಾಗಕ್ಕೆ – 208ಹುದ್ದೆಗಳು (10 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)
NDA ನೌಕಾಪಡೆ ವಿಭಾಗದಲ್ಲಿ – 42 ಹುದ್ದೆಗಳು (05 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)
NDA ವಾಯುಪಡೆ (ಫ್ಲೈಯಿಂಗ್) ವಿಭಾಗದಲ್ಲಿ – 92 ಹುದ್ದೆಗಳು (02 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)
NDA ವಾಯುಪಡೆ ಗ್ರೌಂಡ್ ಡ್ಯೂಟೀಸ್ (ಟೆಕ್) ವಿಭಾಗದಲ್ಲಿ -18 ಹುದ್ದೆಗಳು (02 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)
NDA ವಾಯುಪಡೆ ಗ್ರೌಂಡ್ ಡ್ಯೂಟೀಸ್ (ನಾನ್ ಟೆಕ್) ವಿಭಾಗದಲ್ಲಿ – 10ಹುದ್ದೆಗಳು (02 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)
ನೌಕಾ ಅಕಾಡೆಮಿ 10+2 ಕೆಡೆಟ್ ಪ್ರವೇಶ ಯೋಜನೆ – 24 ಹುದ್ದೆಗಳು (03 ಮಹಿಳಾ ಅಭ್ಯರ್ಥಿಗಳು ಸೇರಿದಂತೆ)

ಒಟ್ಟು 394 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

✓ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇನಾ ಪಡೆ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು.

✓ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ವಾಯುಪಡೆ, ನೌಕಾಪಡೆ ಮತ್ತು ನೌಕಾ ಅಕಾಡೆಮಿಯ 10+2 ಕೆಡೆಟ್ ಪ್ರವೇಶ ಯೋಜನೆ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದೊಂದಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

(ಜನವರಿ 01, 2008ರ ನಂತರ ಮತ್ತು ಜನವರಿ 01, 2011ಕ್ಕಿಂತ ಮೊದಲು) ಎರಡು ದಿನಾಂಕಗಳು ಸೇರಿದಂತೆ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಸಡಿಲಿಕೆ: ಕೇಂದ್ರ ಲೋಕಸೇವಾ ಆಯೋಗದ ನಿಯಮಗಳ ಅನುಸಾರ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • SSB
  • ಸಂದರ್ಶನ/ವ್ಯಕ್ತಿತ್ವ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ವೇತನ:

ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ₹56,100ಗಳಿಂದ ₹2,50,000ವರೆಗೆ ಮಾಹೆಯಾನ ವೇತನ, ಇತರೆ ಭತ್ಯೆ ಹಾಗೂ ಸೌಲಭ್ಯಗಳನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹100/-
ಪ.ಜಾತಿ, ಪ.ಪಂಗಡ, ಮಹಿಳೆಯರು, JCO /NCO ಅಥವಾ OR ವಾರ್ಡ್ ಗಳ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ‌ ಸಲ್ಲಿಸುವ ಪ್ರಕ್ರಿಯೆ…

• ಮೊದಲಿಗೆ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsc.gov.in/ ಗೆ ಭೇಟಿ ನೀಡಿ.

• ಬಳಿಕ *ಹೊಸದೇನಿದೆ* ವಿಭಾಗದ ಕೆಳಗೆ ನೀಡಲಾಗಿರುವ “ಪರೀಕ್ಷಾ ಅಧಿಸೂಚನೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (II), 2026” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

• ಮುಂದುವರೆದಂತೆ *ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (II), 2026* ಅರ್ಜಿ ಸಲ್ಲಿಸಲು “ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯನ್ನು ಕ್ಲಿಕ್ಕಿಸಿ.

• ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ನಮೂದಿಸಿ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websiteupsc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment