ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 2 2024 ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಪರೀಕ್ಷೆಯ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ .
ಈ ನೇಮಕಾತಿಯಲ್ಲಿ ಒಟ್ಟು 404 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಪರೀಕ್ಷೆಯು ನಿರ್ಣಾಯಕ ಹಂತವಾಗಿದೆ. ಮೇ 15 ರಿಂದ ಜೂನ್ 4, 2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಅಭ್ಯರ್ಥಿಗಳು ತಮ್ಮ ಪ್ರವೇಶವನ್ನು ಡೌನ್‌ಲೋಡ್ ಮಾಡಲು UPSC ಅಧಿಕೃತ ವೆಬ್‌ಸೈಟ್ upsconline.nic.in ಭೇಟಿ ನೀಡಿ, ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಲೇಖನದಲ್ಲಿ UPSC NDA 2 Admit Card 2024 ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Download UPSC NDA 2 Admit Card 2024
ಪರೀಕ್ಷೆಯನ್ನು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡುವುದು ಹೇಗೆ…?
- ಮೊದಲಿಗೆ, UPSC ನ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ.
- ಮುಖಪುಟದಲ್ಲಿ “NDA 2 ಪ್ರವೇಶ ಪತ್ರ” ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ID, ರೋಲ್ ನಂಬರ್ ಅಥವಾ ಜನ್ಮ ದಿನಾಂಕವನ್ನು ಸರಿಯಾಗಿ ನಮೂದಿಸಿ.
- ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿರಿ.
Important Direct Links:
UPSC NDA 2 Admit Card 2024 Notice PDF | Download |
UPSC NDA 2 Admit Card 2024 Download Link | Click Here |
Official Website | upsc.gov.in |
More Updates | Karnataka Help.in |