ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ನೌಕಾ ಅಕಾಡೆಮಿ (NA) II, 2025 ರ ಪ್ರವೇಶ ಪತ್ರವನ್ನು ಕೇಂದ್ರ ಲೋಕ ಸೇವಾ ಆಯೋಗವು ಬಿಡುಗಡೆ ಮಾಡಿದೆ.
ಸೆಪ್ಟೆಂಬರ್ 14ರ (ಭಾನುವಾರ) ಭಾರತದಾದ್ಯಂತ ವಿವಿಧ ಪರೀಕ್ಷಾಕೇಂದ್ರಗಳಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು UPSC ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
NDA & NA II ಪರೀಕ್ಷೆಯ ವೇಳಾಪಟ್ಟಿಯನ್ನು ಈಗಾಗಲೇ ಆಯೋಗವು ಬಿಡುಗಡೆ ಮಾಡಿದ್ದು, ಪರೀಕ್ಷೆಯನ್ನು 2 ಪಾಳಿಗಳಲ್ಲಿ ನಡೆಸಲು ನಿರ್ಧರಿಸಿದೆ. ಮೊದಲನೇ ಅವಧಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ ಗಣಿತ ವಿಷಯ ಹಾಗೂ ಎರಡನೇ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳುವ ಸಮಯ ಹಾಗೂ ಪ್ರಮುಖ ಸೂಚನೆಗಳು:
• ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳ ಮೊದಲು ಅಂದರೆ ಬೆಳಗಿನ ಅವಧಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಮತ್ತು ಮಧ್ಯಾಹ್ನದ ಅವಧಿಗೆ ಮಧ್ಯಾಹ್ನ 2 ಗಂಟೆಯ ಒಳಗೆ ಪರೀಕ್ಷಾ ಕೇಂದ್ರದಲ್ಲಿ ವರದಿ ಮಾಡಿಕೊಳ್ಳಬೇಕು.
• ಅಭ್ಯರ್ಥಿಗಳು ತಮ್ಮೊಂದಿಗೆ ಇ-ಪ್ರವೇಶ ಪತ್ರದ ಮುದ್ರಣ, ಪೆನ್ನು, ಪೆನ್ಸಿಲ್, ಗುರುತಿನ ಪುರಾವೆ, ಛಾಯಾಚಿತ್ರಗಳು ಮತ್ತು ಇ-ಪ್ರವೇಶ ಪತ್ರದ ಸೂಚನೆಗಳಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ವಸ್ತುಗಳನ್ನು ಮಾತ್ರ ಸ್ಥಳಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುವುದು.
• ಅಭ್ಯರ್ಥಿಗಳು OMR ಉತ್ತರ ಪತ್ರಿಕೆಗಳು ಮತ್ತು ಹಾಜರಾತಿ ಪಟ್ಟಿಯನ್ನು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಭರ್ತಿ ಮಾಡಬೇಕಾಗಿರುವುದರಿಂದ, ಅಭ್ಯರ್ಥಿಗಳು ಕಪ್ಪು ಬಾಲ್ ಪಾಯಿಂಟ್ ಪೆನ್ ಅನ್ನು ತರುವಂತೆ ಸೂಚಿಸಲಾಗಿದೆ.
How to Download UPSC NDA NA 2 Admit Card 2025
ಪ್ರವೇಶ ಪತ್ರ (ಇ-ಅಡ್ಮಿಟ್ ಕಾರ್ಡ್) ಡೌನ್ಲೋಡ್ ಮಾಡುವ ವಿಧಾನ;
Upsc Online Portal
ಯುಪಿಎಸ್ಸಿ ಅಧಿಕೃತ ವೆಬ್ ಸೈಟ್ https://upsconline.nic.in/ಗೆ ಭೇಟಿ ನೀಡಿ.
ಬಳಿಕ ಅಭ್ಯರ್ಥಿಗಳು ನೋಂದಾಯಿತ ಐಡಿ ಹಾಗೂ ಪಾಸ್ ವರ್ಡ್ ನಮೂದಿಸಿ ಲಾಗಿನ್ ಆಗಿ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (II), 2025 ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಣ ತೆಗೆದುಕೊಳ್ಳಿ.
ಅಭ್ಯರ್ಥಿಗಳ ಗಮನಕ್ಕೆ: ಅಭ್ಯರ್ಥಿಗಳಿಗೆ ಇ-ಅಡ್ಮಿಟ್ ಕಾರ್ಡ್ನಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ತಕ್ಷಣವೇ ಆಯೋಗದ ಅಧಿಕೃತ ಇ-ಮೇಲ್ usnda-upsc@nic.in ಐಡಿಗೆ ತಿಳಿಸಬಹುದು.
Important Direct Links:
UPSC NDA NA 2 Admit Card 2025 Notice PDF (Dated on 4/9/2025)