ಯುಪಿಎಸ್ಸಿ NDA NA ಪರೀಕ್ಷೆ-Iರ ನೋಂದಣಿ ಪ್ರಾರಂಭ

ಪರೀಕ್ಷೆ 2026ರ ಜೂನ್‌-ಜುಲೈನಲ್ಲಿ ನಡೆಯುವ ಸಾಧ್ಯತೆ | ನೋಂದಣಿಗೆ ಡಿ.30ರ ಗಡುವು

Published on:

Updated On:

ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿ(NA) ಪರೀಕ್ಷೆ-Iರ ನೋಂದಣಿಗಾಗಿ ಬುಧವಾರ ಅಧಿಸೂಚನೆ ಹೊರಡಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಗಳಾದ ಸೇನಾ ವಿಭಾಗ, ನೌಕಾಪಡೆ, ವಾಯುಪಡೆಗಳಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಹಾಗೂ ನೌಕಾ ಅಕಾಡೆಮಿಯ (10+2 ಕೆಡೆಟ್ ಪ್ರವೇಶ ಯೋಜನೆ) ವಿಭಾಗಗಳಲ್ಲಿ 394 ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಈ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿ.30ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 10, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಡಿಸೆಂಬರ್ 30, 2025
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 30, 2025
  • ಪರೀಕ್ಷೆಯ ದಿನಾಂಕ – ಜೂನ್‌-ಜುಲೈ, 2026

ಹುದ್ದೆಗಳ ವಿವರ:

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಸೇನಾ ವಿಭಾಗಕ್ಕೆ – 208 ಹುದ್ದೆಗಳು
ನೌಕಾಪಡೆ ವಿಭಾಗದಲ್ಲಿ – 42 ಹುದ್ದೆಗಳು
ವಾಯುಪಡೆ ವಿಭಾಗದಲ್ಲಿ – 120 ಹುದ್ದೆಗಳು
ನೌಕಾ ಅಕಾಡೆಮಿ (10+2 ಕೆಡೆಟ್ ಪ್ರವೇಶ ಯೋಜನೆಯಲ್ಲಿ) – 24 ಹುದ್ದೆಗಳು

ಒಟ್ಟು – 394 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

✓ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಸೇನಾ ವಿಭಾಗಕ್ಕೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ 10+2 ಮಾದರಿಯ ಶಾಲಾ ಶಿಕ್ಷಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

✓ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯವಾಯುಪಡೆ, ನೌಕಾ ವಿಭಾಗ ಮತ್ತು ಭಾರತೀಯ ನೌಕಾ ಅಕಾಡೆಮಿಯಲ್ಲಿ (10+2 ಕೆಡೆಟ್ ಪ್ರವೇಶ ಯೋಜನೆಗೆ); ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ನಡೆಸಲ್ಪಡುವ 10+2 ಶಾಲಾ ಶಿಕ್ಷಣ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ವಿಷಯಗಳೊಂದಿಗೆ 12ನೇ ತರಗತಿ/ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

2007ರ ಜುಲೈ 01 ರ ನಂತರ ಹಾಗೂ 2010ರ ಜುಲೈ 01ಕ್ಕಿಂತ ಮೊದಲು ಜನಿಸಿದ ಪುರುಷ/ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ:

• ಲಿಖಿತ ಪರೀಕ್ಷೆ
• ಬುದ್ಧಿ ಮತ್ತೆ ಮತ್ತು ವ್ಯಕ್ತಿತ್ವ ಪರೀಕ್ಷೆ (SSB)
• ದಾಖಲೆ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಸಂಬಳ:

ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ NDA ನಿಯಮಗಳ ಪ್ರಕಾರ 56,100ರೂ. ಗಳಿಂದ 2,50,000ರೂ. ವರೆಗೆ ಮಾಹೆಯಾನ ವೇತನ, ಇತರೆ ಭತ್ಯೆ ಹಾಗೂ ಸೌಲಭ್ಯಗಳನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

• ಪ.ಜಾತಿ, ಪ.ಪಂಗಡ, ಮಹಿಳಾ, ಸೈನಿಕ್ ಶಾಲೆಯಲ್ಲಿ ಓದುತ್ತಿರುವವರು, JCOS/NCOS/OR ವಾರ್ಡ್‌ಗಳ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100ರೂ.

ಇದನ್ನೂ ಓದಿ: UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I) 2026ರ ನೋಂದಣಿ ಆರಂಭ

ಪರೀಕ್ಷೆಗೆ ನೋಂದಣಿ ಮಾಡುವ ವಿಧಾನ:

• ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/ ಗೆ ಭೇಟಿ ನೀಡಿ.

• ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.

Upsc Online Portal
UPSC Online Portal

• ಲಾಗಿನ್ ಆದ ಬಳಿಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ “ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I), 2026” – ಲಿಂಕ್ ಮೇಲೆ ಟ್ಯಾಪ್ ಮಾಡಿ.

• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವವಿವರ ಸಹಿ ಭಾವಚಿತ್ರ ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websiteupsc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment