UPSC Vacancy 2024: ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

Follow Us:

ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್(Deputy Superintending Archaeologist) ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್(Cabin Safety Inspector) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್, ಈ ಹುದ್ದೆಗಳನ್ನು ಭಾರತೀಯ ಪುರಾತತ್ವ ಇಲಾಖೆ ಮತ್ತು ಸಂಸ್ಕೃತಿ ಸಚಿವಾಲಯದಲ್ಲಿ ಖಾಲಿ‌ ಇರುವ 67 ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಕ್ಯಾಬಿನ್ ಹಾಗೂ 15 ಸುರಕ್ಷತಾ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರಾತತ್ವ, ಮಾನವಶಾಸ್ತ್ರ ಮತ್ತು ಇತಿಹಾಸ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Upsc Vacancy 2024
Upsc Vacancy 2024

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು UPSC Vacancy 2024 ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ upsconline.nic.in ಗೆ ಭೇಟಿ ನೀಡಿ ಸೆಪ್ಟೆಂಬರ್ 9 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ UPSC Deputy Superintending Archaeologist Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 17, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 05, 2024

ಶೈಕ್ಷಣಿಕ ಅರ್ಹತೆಗಳು:

ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ -> ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಪುರಾತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಭಾರತೀಯ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು.

ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ -> ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ದ್ವಿತೀಯ ಪಿಯುಸಿ(PUC) ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷದ ಒಳಗಿರಬೇಕು.

ವೇತನ ವಿವರ:

ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ->ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್‌ನ ಹಂತ 10, ₹56,100 ರಿಂದ ₹1,77,500 ನೀಡಲಾಗುತ್ತದೆ.

ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ -> 7ನೇ ಸಿಪಿಸಿ ಪ್ರಕಾರ ಪೇ ಮ್ಯಾಟ್ರಿಕ್ಸ್‌ನಲ್ಲಿ ಹಂತ- 11ರಂತೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹25
  • SC/ST/ ಪ್ರವರ್ಗ-1/ ಮಹಿಳಾ ಅಭ್ಯರ್ಥಿಗಳಿಗೆ/ವಿಶೇಷ ಚೇತನ ಅಭ್ಯರ್ಥಿಗಳಿಗೆ – ₹00
  • ಶುಲ್ಕ ಪಾವತಿ ವಿಧಾನ : ಆನ್ ಲೈನ್ ನಲ್ಲಿ ಮೂಲಕ ಮಾಡಬೇಕು.

Also Read: Yadgir Anganwadi Recruitment 2024: ಯಾದಗಿರಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

How to Apply UPSC Deputy Superintending Archaeologist Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ UPSC ಅಧಿಕೃತ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ “ವಿವಿಧ ನೇಮಕಾತಿ ಪೋಸ್ಟ್‌ಗಳಿಗಾಗಿ ಆನ್‌ಲೈನ್ ನೇಮಕಾತಿ ಅರ್ಜಿ (ORA)” ಲಿಂಕ್ ಕ್ಲಿಕ್ ಮಾಡಿ.
  • ನಂತರ “Vacancy No. 24081101417” ಹುಡುಕಿ.
  • ಅರ್ಜಿ ಸಲ್ಲಿಸಿ ಆಯ್ಕೆ ‌ಮಾಡಿ , ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
  • ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಮುದ್ರಣವನ್ನು ತೆಗೆದುಕೊಳ್ಳಿ

Important Direct Links:

Official Notification PDFDownload
Online Application Form LinkApply Here
Official websiteupsc.gov.in
More UpdatesKarnataka Help.in

Leave a Comment