Zp Karwar Recruitment 2024: ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ತಾಲೂಕು MIS ಸಂಯೋಜಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಒಂದು ವರ್ಷದ ಒಪ್ಪಂದದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿತ್ತಿದ್ದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವ ಇರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್‌ಸೈಟ್ https://zpkarwar.kar.nic ಭೇಟಿ ನೀಡುವ ಮೂಲಕ ಜುಲೈ 12 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of UK Zilla Panchayat Recruitment 2024
Organization Name – Uttara Kannada Zilla Panchayat Post Name – Taluk MIS Coordinator (MGNREGA) Application Process: Online Job Location – UK (Karwar)
Uttara Kannada Zilla Panchayat Recruitment 2024
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 06, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 12, 2024
ವಿದ್ಯಾರ್ಹತೆ ಮತ್ತು ಅರ್ಹತೆ:
BCA ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಕನಿಷ್ಟ 02 ರಿಂದ 3 ವರ್ಷಗಳ ಅನುಭವ ಹಾಗೂ ಗ್ರಾಮೀಣಾ ಅಭಿವೃದಿ ಕ್ಷೇತ್ರದಲ್ಲಿ ಅನುಭವ ಇರಬೇಕು. ಇದರ ಜೊತೆಗೆ ಕಂಪ್ಯೂಟರ್ ನಾಲೆಡ್ಜ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ 25 ರಿಂದ 40 ವರ್ಷದ ಒಳಗಿರಬೇಕು.
ವೇತನ ಶ್ರೇಣಿ:
28,000 ಮಾಸಿಕ ವೇತನ ಇದರ ಜೊತೆಗೆ 2,000 TA/DA ನೀಡಲಾಗುತ್ತದೆ
How to Apply for Uttara Kannada Zilla Panchayat Recruitment 2024
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಉತ್ತರಕನ್ನಡ ಜಿಲ್ಲಾ ಪಂಚಾಯತ್ ಕಾರವಾರ ಅಧಿಕೃತ ವೆಬ್ಸೈಟ್ https://zpkarwar.kar.nic ಮೂಲಕ ಅರ್ಜಿಗಳನ್ನು ಆನ್‌ಲೈನ್ ನಲ್ಲಿ ಸಲ್ಲಿಸಬೇಕು