ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಗ್ರಾಮ ಆಡಳಿತ ಅಧಿಕಾರಿ (VA) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸುತ್ತದೆ. ಸೆಪ್ಟೆಂಬರ್ 29 ರಂದು ನಡೆಯಲಿರುವ ಕಡ್ಡಾಯ ಕನ್ನಡ ಪರೀಕ್ಷೆಯ ಪ್ರವೇಶ ಪತ್ರ(VA Compulsory Kannada Exam Hall Ticket 2024)ಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ಲಿಂಕ್ ಅಥವಾ ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
VA Exam Hall Ticket 2024: ಈ ನೇಮಕಾತಿಯಲ್ಲಿ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಈ ಪರೀಕ್ಷೆಗೆ ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಸೆಪ್ಟೆಂಬರ್ 29 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ನಂತರ ಅಕ್ಟೋಬರ್ 26ರಂದು ಪತ್ರಿಕೆ 1 ಮತ್ತು 2ರ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಹಾಲ್ ಟಿಕೆಟ್ ಅನ್ನು ಡೌನ್‌ಲೋಡ್ ಮಾಡಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ cetonline.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿ ಪ್ರಕ್ರಿಯೆಯಲ್ಲಿ ಒದಗಿಸಲಾದ ಲಾಗಿನ್ ರುಜುವಾತುಗಳನ್ನು ನಮೂದಿಸಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷಯ ಪ್ರವೇಶ ಪತ್ರಗಳನ್ನು ಅನ್ ಲೈನ್ ನಲ್ಲಿ ಡೌನ್‌ಲೋಡ್ ಮಾಡುವುದು ಹೇಗೆ ಎಂಬುದನ್ನು ತಿಳಿಸಲಾಗಿದೆ.
KEA VA Recruitment 2024 ಪರೀಕ್ಷಾ ದಿನಾಂಕಗಳು
- ಕಡ್ಡಾಯ ಕನ್ನಡ ಪರೀಕ್ಷೆಯ ದಿನಾಂಕ – ಸೆಪ್ಟೆಂಬರ್ 29, 2024
- ಪತ್ರಿಕೆ-1&2 ರ ನಡೆಯುವ ದಿನಾಂಕ – ಅಕ್ಟೋಬರ್ 26, 2024
How to Download Karnataka Village Administrative Officer (VA) Exam Admit Card?
ಅನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡುವುದು ಹೇಗೆ…?
- ಮೊದಲಿಗೆ ಅಧಿಕೃತ ವೆಬ್ ಸೈಟ್ cetonline.karnataka.gov.in ಗೆ ನೀಡಿ.
- ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗಕ್ಕೆ ಕ್ಲಿಕ್ ಮಾಡಿ.
- ನಂತರ ‘ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024’ ಆಯ್ಕೆ ಮಾಡಿ.
- ಅಲ್ಲಿ ‘Admit card Download Link’ ಲಿಂಕ್ ಕ್ಲಿಕ್
- ಅರ್ಜಿ ಸಂಖ್ಯೆ ಮತ್ತು ಅಭ್ಯರ್ಥಿಯ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಿ.
- ಪ್ರವೇಶ ಪತ್ರದ PDF ತೆರೆದುಕೊಳ್ಳುತ್ತೇದೆ, ಅದನ್ನು ಪ್ರಿಂಟ್ ಮಾಡಿ ಉಳಿಸಿಕೊಳ್ಳಿ.
Important Direct Links:
VAO Kannada Exam Bell Timing PDF | Download |
VA and PSI Comp-Kannada Exam Dress Code | Download |
VAO/GTTC Kannada Exam Hall Ticket Download Link | Hall Ticket |
VA Recruitment 2024 | Details |
Official Website | Kar.Nic.in |
More Updates | KarnatakaHelp.in |
I am rakshith Raj