Village Accountant – VA Recruitment 2024 Karnataka: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Karnataka Revenue Department Post Name – Village Accountant (VA)/Village Administrative Officer Total Vacancy – 1000 Application Process: Online Job Location – Karnataka
Qualification, Age Limit, Application Fee Selection Process Details
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 20-02-2024 ಅರ್ಜಿ ಸಲ್ಲಿಕೆ ಆರಂಭ ದಿನಾಂಕ –19-09-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-09-2024 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 29-09-2024
ಶೈಕ್ಷಣಿಕ ಅರ್ಹತೆ:
ಕಂದಾಯ ಇಲಾಖೆ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ 12th(PUC)/Diploma/ITI ವಿದ್ಯಾರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಕಂದಾಯ ಇಲಾಖೆ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಸಿಆಸುಇ 166 ಸೇನೆನಿ 2024 ದಿನಾಂಕ 10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಿಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿರುತ್ತದೆ.
ಕನಿಷ್ಠ – 18 ವರ್ಷ,
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 38 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 41 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷ
ಆಯ್ಕೆ ಪ್ರಕ್ರಿಯೆ:
ಕಂದಾಯ ಇಲಾಖೆ ನೇಮಕಾತಿಗಾಗಿ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ/ಸಂದರ್ಶನ
ಸಂಬಳ:
ಕಂದಾಯ ಇಲಾಖೆ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-42000 ವೇತನ ಶ್ರೇಣಿಯಂತೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಸೇರಿದ ಅಭ್ಯರ್ಥಿಗಳಿಗೆ – ರೂ.750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1// ಮಾಜಿ ಸೈನಿಕ /ಅಂಗವಿಕಲ ಅಭ್ಯರ್ಥಿಗಳಿಗೆ – ರೂ.500/-