ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
2023-24ನೇ ಮತ್ತು 2024-25ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟ ಮತ್ತು ಸರ್ಕಾರದ ಸಾಂಸ್ಥಿಕ ಕೋಟಾದಡಿ ಸಲ್ಲಿಸುವ ಅರ್ಜಿಗಳನ್ನು ಸಹ ಸೇವಾ ಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಆಗಸ್ಟ್ 18, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 17, 2025
ಯೋಜನೆಗಳ ವಿವರ:
✓ ಭೂ ಒಡೆತನ ಯೋಜನೆ(Land Purchase Subsidy Scheme):-
ಪರಿಶಿಷ್ಟ ಪಂಗಡದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಈ ಯೋಜನೆಯಡಿಘಟಕ ವೆಚ್ಚ 25/20 ಲಕ್ಷರೂ. ಗಳಲ್ಲಿ ಸಹಾಯಧನ ಶೇ.50%, ಸಾಲ ಶೇ.50% (4ರಷ್ಟು ಬಡ್ಡಿ) ದರದಲ್ಲಿ ಜಮೀನನ್ನು ಕೃಷಿ ಉದ್ದೇಶಕ್ಕೆ ಖರೀದಿಸಿ ಕೊಡಲಾಗುತ್ತದೆ.
✓ ಗಂಗಾ ಕಲ್ಯಾಣ ಯೋಜನೆ(Ganga Kalyana Scheme):-
ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರು ಹೊಂದಿರುವ 1.20 ಯಿಂದ 5 ಎಕರೆ ಕೃಷಿ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪಸೆಟ್ ಸರಬರಾಜು ಮಾಡಿ, ಅಳವಡಿಸಿ ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ ಕಲ್ಪಿಸಲು ಘಟಕ ವೆಚ್ಚ 4.75ಲಕ್ಷ/3.75 ಲಕ್ಷ ರೂ. (ಇದರಲ್ಲಿ 50 ಸಾವಿರರೂ. ಸಾಲವೂ ಸೇರಿರುತ್ತದೆ.) ಒದಗಿಸಲಾಗುವುದು.
✓ ನೇರ ಸಾಲ ಯೋಜನೆ(Self Employment Scheme Loan):-
ಈ ಯೋಜನೆ ಅಡಿಯಲ್ಲಿ ಪ.ಪಂಗಡದ ಅಭ್ಯರ್ಥಿಗಳಿಗೆ ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಹಾಗೂ ನೇರ ಸಾಲವನ್ನು ಮಂಜೂರು ಮಾಡಲಾಗುತ್ತದೆ.
✓ ಹೈನುಗಾರಿಕೆ(Dairy Farming Loan Scheme):-
ಈ ಯೋಜನೆಯಡಿಯಲ್ಲಿ ಬ್ಯಾಂಕುಗಳ ಸಹಯೋಗದೊಂದಿಗೆ ಹೈನುಗಾರಿಕೆ ಕೈಗೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಎರಡು ಎಮ್ಮೆ ಅಥವಾ ಹಸು ಖರೀದಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಸ್ವಾವಲಂಬ ಸಾರಥಿ(Swavalambi Sarathi Scheme):-
ಈ ಯೋಜನೆಯಡಿಯಲ್ಲಿ ಬ್ಯಾಂಕುಗಳ ಸಹಯೋಗದೊಂದಿಗೆ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಸಹಕಾರಿಯಾಗುವಂತೆ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ 4ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ:-
ಈ ಯೋಜನೆಯಡಿಯಲ್ಲಿ ಬ್ಯಾಂಕುಗಳ ಸಹಯೋಗದೊಂದಿಗೆ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಸಲುವಾಗಿ ಆರ್ಥಿಕ ಬೆಂಬಲವನ್ನು ನೀಡಲಾಗುತ್ತದೆ.
✓ ಇತರೆ ಉದ್ದೇಶ:-
ವ್ಯಾಪಾರ ಮತ್ತು ಇತರೆ ಉದ್ದೇಶ ಹೊಂದಿರುವ ಅಭ್ಯರ್ಥಿಗಳಿಗೆ ಘಟಕ ವೆಚ್ಚದ ಶೇಕಡ 70ರಷ್ಟು ಅಥವಾ ಗರಿಷ್ಠ 2 ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ[Micro Credit Scheme]:-
ಈ ಯೋಜನೆಯಡಿಯಲ್ಲಿ ಕನಿಷ್ಟ 10 ಸದಸ್ಯರನ್ನು ಹೊಂದಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚದ 5 ಲಕ್ಷ ರೂ. (ಸಹಾಯಧನ 2.5 ಲಕ್ಷ ರೂ., ಸಾಲ 2.5 ಲಕ್ಷ ರೂ.,) 4ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
- ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ 1,50,000ರೂ., ಹಾಗೂ ನಗರ ಪ್ರದೇಶದ ಅಭ್ಯರ್ಥಿಗಳಿಗೆ 2 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.
- ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
- ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.
- ವಾಹನಗಳ ಸೌಲಭ್ಯ ಪಡೆಯಲು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿದಾರರು ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 56 ರಿಂದ 60 ವರ್ಷಗಳು
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು
- ಭಾವಚಿತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ಬುಕ್
- ಯೋಜನಾ ವರದಿ
ಹಾಗೂ ಇತರೆ ದಾಖಲೆಗಳು
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
How to Apply for Valmiki Nigama Subsidy Loan Scheme 2025-26
ಅರ್ಜಿ ಸಲ್ಲಿಸುವ ವಿಧಾನ;
ಅರ್ಜಿ ಸಲ್ಲಿಸಲು ನಿಮಗೆ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.
• ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ನಲ್ಲಿ ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿಯನ್ನು ಸಂಪರ್ಕಿಸಬಹುದು.
Important Direct Links:
Online Application Form Link | sevasindhu.karnataka.gov.in |
Official Website | kmvstdcl.karnataka.gov.in |
More Updates | KarnatakaHelp.in |
Somebody essentially help to make significantly articles Id state This is the first time I frequented your web page and up to now I surprised with the research you made to make this actual post incredible Fantastic job