ವೀರಶೈವ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿ

ಎಸ್ಸೆಸ್ಸೆಲ್ಸಿ, ಪದವಿ ಅರ್ಹತೆ

Published on:

ಬೆಂಗಳೂರು: ವಿಜಯನಗರದ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಕಿರಿಯ ಸಹಾಯಕರು-10 ಹಾಗೂ ಅಟೆಂಡರ್-02 ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ಭರ್ತಿ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ಣಗೊಳಿಸಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮೇ 27ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣ http://www.vsbank.in/ ಅಥವಾ https://tascguru.com/veerashaiva-sahakari-bank/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಏಪ್ರಿಲ್ 27, 2026
  • ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 27, 2027

ಶೈಕ್ಷಣಿಕ ಅರ್ಹತೆ:

✓ ಕಿರಿಯ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಮತ್ತು ಕಂಪ್ಯೂಟರ್ ಬಳಕೆಯ ಉತ್ತಮ ಜ್ಞಾನವನ್ನು ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನ್ನಡವನ್ನು ಓದುವ ಸಾಮರ್ಥ್ಯ, ಕನ್ನಡದ ಜ್ಞಾನ, ಬರೆಯುವಿಕೆ ಜೊತೆಗೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು & ಅರ್ಥಮಾಡಿಕೊಳ್ಳಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡವನ್ನು ಐಚ್ಛಿಕ ಭಾಷೆಯಾಗಿ ಓದಿರಬೇಕು.

✓ ಅಟೆಂಡರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು

ಗರಿಷ್ಠ ವಯಸ್ಸಿನ ಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು, ಇತರೆ ಹಿಂದುಳಿದ ವರ್ಗದ (2-ಎ. 2-ಬಿ, 3-ಎ ಮತ್ತು 3-ಬಿ) ಅಭ್ಯರ್ಥಿಗಳಿಗೆ 38 ವರ್ಷಗಳು, ಪ.ಜಾತಿ, ಪ,ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 05 ವರ್ಷ, ಇತರೆ ಹಿಂದುಳಿದ ವರ್ಗದ (2-ಎ. 2-ಬಿ, 3-ಎ ಮತ್ತು 3-ಬಿ) ಅಭ್ಯರ್ಥಿಗಳಿಗೆ 05 ವರ್ಷ, ಪ.ಜಾತಿ, ಪ,ಪಂಗಡಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 05 ವರ್ಷಗಳವರೆಗೆ ಗರಿಷ್ಠ ವಯೋಮಿತಿ ಸಡಿಲಿಕೆ ಇರಲಿದೆ.

ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಸಂಬಳ:

ಕಿರಿಯ ಸಹಾಯಕರು ಹುದ್ದೆಗಳಿಗೆ ₹49,050-92,500
ಅಟೆಂಡರ್ ಹುದ್ದೆಗಳಿಗೆ ₹34,100-67,600

ಅರ್ಜಿ ಶುಲ್ಕ:

✓ ಕಿರಿಯ ಸಹಾಯಕರು ಹುದ್ದೆಗೆ; ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ (2-ಎ. 2-ಬಿ, 3-ಎ ಮತ್ತು 3-ಬಿ) ಅಭ್ಯರ್ಥಿಗಳಿಗೆ ₹2,360/- ಹಾಗೂ ಮಹಿಳೆಯರು, ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹1,180/-

✓ ಅಟೆಂಡರ್ ಹುದ್ದೆಗೆ; ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ (2-ಎ. 2-ಬಿ, 3-ಎ ಮತ್ತು 3-ಬಿ) ಅಭ್ಯರ್ಥಿಗಳಿಗೆ ₹1,180/- ಹಾಗೂ ಮಹಿಳೆಯರು, ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹590

ಅರ್ಜಿ ಸಲ್ಲಿಸುವುದು ಹೇಗೆ.?

• ಮೊದಲಿಗೆ ಅಭ್ಯರ್ಥಿಗಳು ವೀರಶೈವ ಸಹಕಾರಿ ಬ್ಯಾಂಕ್ ಅಧಿಕೃತ ಜಾಲತಾಣ https://tascguru.com/veerashaiva-sahakari-bank/ ಕ್ಕೆ ಭೇಟಿ ನೀಡಿ.

• ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆಯ ಮೇಲೆ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

Veerashaiva Sahakari Bank Notification 2026
ವೀರಶೈವ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿ

• ಅರ್ಜಿದಾರರ ಮೊಬೈಲ್ ಸಂಖ್ಯೆ ನಮೂದಿಸಿ ಓಟಿಪಿ ಪಡೆದು ಮುಂದುವರೆಯಿರಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ನೈನ್‌ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.vsbank.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ವೀರಶೈವ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿ”

Leave a Comment