ವಿಜಯಪುರ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ನೇರ ನೇಮಕಾತಿ; ವಿದ್ಯಾರ್ಹತೆ ಬೇಕಿಲ್ಲ..

Published on:

ವಿಜಯಪುರ: ಜಿಲ್ಲೆಯ ಮಹಾನಗರ ಪಾಲಿಕೆ ಮತ್ತು ನಗರ ಸಭೆಗಳಲ್ಲಿ ಖಾಲಿ ಇರುವ 118 ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶವು ಅಧಿಸೂಚನೆ ಹೊರಡಿಸಿದೆ.

ಅರ್ಜಿ ಸಲ್ಲಿಸಲು ಜುಲೈ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಮಾನದಂಡವಿರುವುದಿಲ್ಲ, ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ವಿಜಯಪುರ ಮಹಾನಗರ ಪಾಲಿಕೆ ಅಧಿಕೃತ ಜಾಲತಾಣ http://www.vijayapuracity.mrc.gov.in/kn/recuritmentದ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ, ವಿಜಯಪುರ ಮಹಾನಗರ ಪಾಲಿಕೆ ಕೇಂದ್ರ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜೂನ್ 10, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 15, 2026

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

• ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ ಹಾಗೂ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ತಿಳಿದಿರಬೇಕು.

• ವಿಜಯಪುರ ಮಹಾನಗರ ಪಾಲಿಕೆಯಲ್ಲಿಈ ಹಿಂದೆ ಹೊರಗುತ್ತಿಗೆ/ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಕನಿಷ್ಠ 01 ವರ್ಷ ಪೌರಕಾರ್ಮಿಕ, ಲೋಡರ್ಸ್, ಯುಜಿಡಿ ಹೆಲ್ಪರ್ಸ್, ಕ್ಲೀನರ್ಸ್ ಹಾಗೂ ಹೆಲ್ಸರ್ಸ್‌ ಗಳಾಗಿ ಕಾರ್ಯನಿರ್ವಹಿಸುತ್ತಿರುವ/ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

• ಈ ಹಿಂದೆ ಪಾಲಿಕೆಯಲ್ಲಿ ಹೊರಗುತ್ತಿಗೆ/ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುವಾಗ ಕೋವಿಡ್-19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಅಥವಾ ಇತರೆ ಕಾರಣಗಳಿಂದಾಗಿ ಮರಣ ಹೊಂದಿದ ಪೌರಕಾರ್ಮಿಕರ ಕುಟುಂಬದ ಒಬ್ಬ ಸದಸ್ಯರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 50 ವರ್ಷಗಳು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

• ಅಭ್ಯರ್ಥಿಗಳ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
• ಜನ್ಮ ದಿನಾಂಕದ ದೃಢೀಕರಣಕ್ಕಾಗಿ ವರ್ಗಾವಣೆ ಪ್ರಮಾಣ ಪತ್ರ/ಜನನ ಪ್ರಮಾಣ ಪತ್ರ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ (EPIC)/ಗುರುತಿನ ಚೀಟಿ
• ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ 01 ವರ್ಷಕ್ಕಿಂತ ಕಡಿಮೆ ಇಲ್ಲದೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ/ಕಾರ್ಯನಿರ್ವಹಿಸಿದ ದೃಢೀಕತ ದಾಖಲೆ.
• ಸೇವಾ ಪ್ರಮಾಣ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳು…

ಆಯ್ಕೆ ವಿಧಾನ:

ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ನೇರ ಪಾವತಿಯಡಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯನ್ವಯ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ಪರಿಷ್ಕರಿಸುವ ವೇತನದೊಂದಿಗೆ ಪಿ.ಎಫ್ ಮತ್ತು ಇ.ಎಸ್.ಐ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

• ವಿಜಯಪುರ ಮಹಾನಗರ ಪಾಲಿಕೆ ಅಧಿಕೃತ ಜಾಲತಾಣ http://www.vijayapuracity.mrc.gov.in/kn/recuritment ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.

ಅಥವಾ

• ವಿಜಯಪುರ ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಅರ್ಜಿ ಲಕೋಟೆಯ ಮೇಲೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ.

• ಜುಲೈ 15ರೊಳಗೆ ವಿಜಯಪುರ ಮಹಾನಗರ ಪಾಲಿಕೆ ಕೇಂದ್ರ ಕಚೇರಿಗೆ ಸಲ್ಲಿಸಬಹುದು.

Important Direct Links:

Official Notification and Application Form PDFDownload
Official Websitewww.vijayapuracity.mrc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ವಿಜಯಪುರ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ನೇರ ನೇಮಕಾತಿ; ವಿದ್ಯಾರ್ಹತೆ ಬೇಕಿಲ್ಲ..”

Leave a Comment