ವಿಜಯಪುರ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ/ಸೇವಕ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಒಟ್ಟು 30 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ನವೆಂಬರ್ 05
- ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಡಿಸೆಂಬರ್ 04(ರಾತ್ರಿ 11.59 ರವರೆಗೆ)
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
(ತತ್ಸಮಾನ ವಿದ್ಯಾರ್ಹತೆಗಳಾಗಿ ಸಿ.ಬಿ.ಎಸ್.ಇ/ಐ.ಸಿ.ಎಸ್.ಇ ಕ್ಲಾಸ್ 10, ಇತರೆ ರಾಜ್ಯಗಳ ಕ್ಲಾಸ್ 10, ಎನ್.ಐ.ಓ.ಎಸ್(NIOS) ಮತ್ತು ಕೆ.ಓ.ಎಸ್ (KOS) ಪ್ರೌಢ ಶಿಕ್ಷಣ ಕೋರ್ಸ್‌ಗಳನ್ನು ಪರಿಗಣಿಸಲಾಗುವುದು)
ಅಭ್ಯರ್ಥಿಗಳಿಗೆ ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಇರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
ಗರಿಷ್ಠ ವಯೋಮಿತಿ ಸಡಿಲಿಕೆಯನ್ನು ಒಳಗೊಂಡಂತೆ ಈ ಕೆಳಗಿನಂತಿದೆ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು
- ಪ್ರವರ್ಗ-2(ಎ), 2(ಬಿ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷಗಳು
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು
ನಿಯಮಾನುಸಾರ ಅಂಗವಿಕಲರು, ವಿಧವೆಯರು, ಮಾಜಿ ಸೈನಿಕರು ಹಾಗೂ ಜೀತ ಕಾರ್ಮಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಹೆಚ್ಚುವರಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ(SSLC) ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ 1:10 ರ ಅನುಪಾತದಲ್ಲಿ (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಸಂದರ್ಶನವು ಗರಿಷ್ಠ 10 ಅಂಕಗಳನ್ನು ಒಳಗೊಂಡಿರುತ್ತದೆ.
ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಮಾಡಲಾಗುವುದು.
ಸಂಬಳ:
ವೇತನ ಶ್ರೇಣಿ ರೂ.27000-650-29600-725-32500-800-35700-900-39300-1000-43300-1125-46675 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300/-
- ಪ್ರವರ್ಗ-2(ಎ), 2(ಬಿ), 3(ಎ) ಹಾಗೂ 3(ಬಿ) ಅಭ್ಯರ್ಥಿಗಳಿಗೆ ರೂ.150/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ (ಯಾವುದೇ ಶುಲ್ಕ ಇರುವುದಿಲ್ಲ).
ಅರ್ಜಿ ಸಲ್ಲಿಕೆ ಹೇಗೆ?
- ಅಭ್ಯರ್ಥಿಗಳು ವಿಜಯಪುರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್: https://vijayapura.dcourts.gov.in/online-recruitment/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
- ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮುಖ್ಯ ಲಿಂಕ್‌ಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಡೌನ್ಲೋಡ್ ಮಾಡಿ |
| ಆನ್‌ಲೈನ್ ಅರ್ಜಿ ನಮೂನೆ ಲಿಂಕ್ | ಈಗಲೇ ಅರ್ಜಿ ಸಲ್ಲಿಸಿ |
| ಅಧಿಕೃತ ಜಾಲತಾಣ | vijayapura.dcourts.gov.in |
| ಮತ್ತಷ್ಟು ಸುದ್ದಿಗಳಿಗಾಗಿ | ಕರ್ನಾಟಕ ಹೆಲ್ಪ್.ಇನ್ |