ವಿಜಯನಗರ: ಹೊಸಪೇಟೆಯ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕು ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಏ.09ರಿಂದ ಪ್ರಾರಂಭವಾಗಿದೆ.
ವ್ಯವಸ್ಥಾಪಕ/ಹಿರಿಯ ಅಧಿಕಾರಿ-10, ಲೆಕ್ಕ ಪರಿಶೋಧಕ-04, ಕಾನೂನು ಅಧಿಕಾರಿ-02, ಪರೀಕ್ಷಾರ್ಥ ಅಧಿಕಾರಿ(ಪಿಒ)-20 ಹಾಗೂ ವಸೂಲಾತಿ ಸಹಾಯಕ/ಕಿರಿಯ ಸಹಾಯಕ-10 ಸೇರಿದಂತೆ ಒಟ್ಟು 46 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಪಿಒ ಹುದ್ದೆಗೆ ಮಾತ್ರ ಲಿಖಿತ ಪರೀಕ್ಷೆ ಹಾಗೂ ಇನ್ನುಳಿದ ಹುದ್ದೆಗಳನ್ನು ಮೌಖಿಕ ಸಂದರ್ಶನದ ಮೂಲಕ ನೇಮಕ ಮಾಡಲಿದೆ. ಆಸಕ್ತ ಅಭ್ಯರ್ಥಿಗಳು ವಿಕಾಸ ಬ್ಯಾಂಕ್ ಅಧಿಕೃತ ಜಾಲತಾಣ https://vikas.bank.in/page/272ಕ್ಕೆ ಭೇಟಿ ನೀಡಿ, ಏ.24ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 24, 2026
ಪಿಒ ಆನ್ಲೈನ್ ಪರೀಕ್ಷೆಯ ದಿನಾಂಕ – ಏಪ್ರಿಲ್ 26, 2026
ಮೌಕಿಕ ಸಂದರ್ಶನ ನಡೆಯುವ ದಿನಾಂಕ – ಏಪ್ರಿಲ್ 27, 2026
ಶೈಕ್ಷಣಿಕ ಅರ್ಹತೆ:
✓ ವ್ಯವಸ್ಥಾಪಕ/ಹಿರಿಯ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿಯೊಂದಿಗೆ ತಂತ್ರಜ್ಞಾನದ ಜ್ಞಾನ ಹೊಂದಿರಬೇಕು ಹಾಗೂ ಹಣಕಾಸು ಮತ್ತು ಬ್ಯಾಂಕಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
✓ ಲೆಕ್ಕ ಪರಿಶೋಧಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾಮರ್ಸ್/ಅಕೌಂಟಿಂಗ್ ವಿಭಾಗದಲ್ಲಿ ಪದವಿಯೊಂದಿಗೆ ಸಿಎ, ಸಿಎಂ ಮತ್ತು ಸಾಫ್ಟ್ ಸ್ಕಿಲ್ ಅರ್ಹತೆಯನ್ನು ಹೊಂದಿರಬೇಕು ಮತ್ತು ಲೆಕ್ಕಪರಿಶೋಧನೆಯಲ್ಲಿ ವಿಶೇಷ ಅರ್ಹತೆಯನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
✓ ಕಾನೂನು ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನಿನಲ್ಲಿ ಪದವಿ ಹಾಗೂ ಪ್ರಾಯೋಗಿಕ ಅನುಭವದೊಂದಿಗೆ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ಪರೀಕ್ಷಾರ್ಥ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾಮರ್ಸ್, ಬ್ಯಾಂಕಿಂಗ್ ಮತ್ತು ಅಕೌಂಟಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ ವಸೂಲಾತಿ ಸಹಾಯಕ/ಕಿರಿಯ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.
ವಯೋಮಿತಿ:
01-04-2026 ರಂತೆ;
• ವ್ಯವಸ್ಥಾಪಕರು/ಹಿರಿಯ ಅಧಿಕಾರಿ, ಲೆಕ್ಕ ಪರಿಶೋಧಕರು ಹಾಗೂ ಕಾನೂನು ಅಧಿಕಾರಿ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ 35 ವರ್ಷಗಳು
• ಪರೀಕ್ಷಾರ್ಥ ಅಧಿಕಾರಿ ಹಾಗೂ ವಸೂಲಾತಿ ಸಹಾಯಕ/ಕಿರಿಯ ಸಹಾಯಕ ಹುದ್ದೆಗಳಿಗೆಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ(ಪಿಒ ಹುದ್ದೆಗೆ ಮಾತ್ರ) ಮೌಖಿಕ ಸಂದರ್ಶನ ಅಂತಿಮ ಮೆರಿಟ್ ಪಟ್ಟಿ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಮಾನದಂಡಗಳ ಅನುಸಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ
• ಅಭ್ಯರ್ಥಿಗಳು ವಿಕಾಸ ಬ್ಯಾಂಕ್ ಅಧಿಕೃತ ಜಾಲತಾಣ https://vikas.bank.in/ ಕ್ಕೆ ಭೇಟಿ ನೀಡಿ.
• ಬಳಿಕ ಉದ್ಯೋಗ ಅಧಿಸೂಚನೆಗಳು ವಿಭಾಗದಲ್ಲಿ ನೀಡಲಾಗಿರುವ *Recruitment Notification – Applications are invited – For more details click here* ಆಯ್ಕೆಯನ್ನು ಆರಿಸಿ.
• ನಂತರ ಅಪ್ಲೈ ಆನ್ಲೈನ್ *Click here* ಆಯ್ಕೆ ಮೇಲೆ ಟ್ಯಾಪ್ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 6364468045 ಅನ್ನು ಸಂಪರ್ಕಿಸಬಹುದು.