Breaking News: ಗ್ರಾಮ ಆಡಳಿತ ಅಧಿಕಾರಿಯ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ

ಫಾಲೋ ಮಾಡಿ
breaking news

Village Administrative Officer online Application extended: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಈಗಾಗಲೇ ಮಾಡಲಾಗಿದ್ದು, ಈ ನೇಮಕಾತಿಯಲ್ಲಿ ಖಾಲಿ ಇರುವ 1000 ಹುದ್ದೆಗಳಿಗೆ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. KEA ಅಧಿಕೃತ ವೆಬ್‌ಸೈಟ್ ಬಳಸಿಕೊಂಡು KEA VAO ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಸಲ್ಲಿಸಬಹುದು.

ನೇಮಕಾತಿ ಪ್ರಾಧಿಕಾರವು ಆನ್‌ಲೈನ್ ಅರ್ಜಿಗಳು ಮತ್ತು ನೋಂದಣಿ ಪ್ರಕ್ರಿಯೆಯನ್ನು 05 ಏಪ್ರಿಲ್ 2024 ರಂದು ಪ್ರಾರಂಭಿಸಿತು ಮತ್ತು ಅದನ್ನು ಸಲ್ಲಿಸಲು ಕೊನೆಯ ದಿನಾಂಕ 04 ಮೇ 2024ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಸಾಕಷ್ಟು ವಿದ್ಯಾರ್ಥಿಗಳು ಸುಂಕ ಪಾವತಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮಾಡಿಲ್ಲದ ಕಾರಣ ಅರ್ಜಿ ಸಲ್ಲಿಕೆಯನ್ನು ಮುಂದೂಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳನ್ನು ಮೇ 15ರವರೆಗೂ ವಿಸ್ತರಿಸಲಾಗಿದ್ದು ಶುಲ್ಕ ಪಾವತಿಗೆ ಮೇ‌ 18ರವರೆಗೂ ಅವಕಾಶ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment