ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಟ್ರೈನಿ ಕ್ರಾಫ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28, 2025 ರಂದು ವಾಕ್ ಇನ್ ಇಂಟರ್ವ್ಯೂಗೆ ಹಾಜರಾಗಲು ತಿಳಿಸಲಾಗಿದೆ.
ಫಿಟ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಹುದ್ದೆಗೆ ವಾಕ್ ಇನ್ ಸಂದರ್ಶನ ದಿನಾಂಕ – ಅಕ್ಟೋಬರ್ 28, 2025
ವೆಲ್ಡರ್ ಮತ್ತು ಎಲೆಟ್ರಿಕಲ್ ಹುದ್ದೆಗೆ ವಾಕ್ ಇನ್ ಸಂದರ್ಶನ ದಿನಾಂಕ – ನವೆಂಬರ್ 1, 2025
ಖಾಲಿ ಹುದ್ದೆಗಳ ವಿವರ:
ಫಿಟ್ಟರ್ – 2 ಹುದ್ದೆಗಳು
ಎಲೆಕ್ಟ್ರಾನಿಕ್ಸ್ – 2 ಹುದ್ದೆಗಳು
ವೆಲ್ಡರ್ – 1 ಹುದ್ದೆಗಳು
ಎಲೆಟ್ರಿಕಲ್ – 1 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ , ಐ.ಟಿ.ಐ. ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆಯಲ್ಲಿ ವಯೋಮಿತಿ ಹಾಗೂ ವಯೋಮಿತಿ ಸಡಿಲಿಕೆ ಕುರಿತಂತೆ ಯಾವುದೇ ಮಾಹಿತಿ ನೀಡಿರುವುದಿಲ್ಲ. ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಟಿಟ್ಯೂಡ್/ಟ್ರೇಡ್ ಟೆಸ್ಟ್
ಸಂದರ್ಶನ
ವೇತನ:
ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 22000/- ವೇತನ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅರ್ಜಿ ನಮೂನೆಯ ಲಿಂಕ್ Important Direct Links ವಿಭಾಗದಲ್ಲಿ ನೀಡಲಾಗಿದೆ. ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ.
ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಅನುಭವ ಇತ್ಯಾದಿ ದಾಖಲೆಗಳ ಛಾಯ ಪ್ರತಿಯನ್ನು ಅರ್ಜಿ ನಮೂನೆಗೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಕೊನೆಗೆ ಅರ್ಜಿ ನಮೂನೆಯನ್ನು ಅಧಿಸೂಚನೆಯಲ್ಲಿ ತಿಳಿಸಿದಂತೆ ಪೋಸ್ಟ್ ಮಾಡಿ, ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ –ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM), ಕಸ್ತೂರಬಾ ರಸ್ತೆ, ಬೆಂಗಳೂರು-560001.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.