ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಟ್ರೈನಿ ಕ್ರಾಫ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28, 2025 ರಂದು ವಾಕ್ ಇನ್ ಇಂಟರ್ವ್ಯೂಗೆ ಹಾಜರಾಗಲು ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆ ದಿನಾಂಕ – ಸೆಪ್ಟೆಂಬರ್ 29, 2025
- ಫಿಟ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಹುದ್ದೆಗೆ ವಾಕ್ ಇನ್ ಸಂದರ್ಶನ ದಿನಾಂಕ – ಅಕ್ಟೋಬರ್ 28, 2025
- ವೆಲ್ಡರ್ ಮತ್ತು ಎಲೆಟ್ರಿಕಲ್ ಹುದ್ದೆಗೆ ವಾಕ್ ಇನ್ ಸಂದರ್ಶನ ದಿನಾಂಕ – ನವೆಂಬರ್ 1, 2025
ಖಾಲಿ ಹುದ್ದೆಗಳ ವಿವರ:
- ಫಿಟ್ಟರ್ – 2 ಹುದ್ದೆಗಳು
- ಎಲೆಕ್ಟ್ರಾನಿಕ್ಸ್ – 2 ಹುದ್ದೆಗಳು
- ವೆಲ್ಡರ್ – 1 ಹುದ್ದೆಗಳು
- ಎಲೆಟ್ರಿಕಲ್ – 1 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ , ಐ.ಟಿ.ಐ. ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆಯಲ್ಲಿ ವಯೋಮಿತಿ ಹಾಗೂ ವಯೋಮಿತಿ ಸಡಿಲಿಕೆ ಕುರಿತಂತೆ ಯಾವುದೇ ಮಾಹಿತಿ ನೀಡಿರುವುದಿಲ್ಲ. ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆ ಪ್ರಕ್ರಿಯೆ:
- ಅಟಿಟ್ಯೂಡ್/ಟ್ರೇಡ್ ಟೆಸ್ಟ್
- ಸಂದರ್ಶನ
ವೇತನ:
ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 22000/- ವೇತನ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಅರ್ಜಿ ನಮೂನೆಯ ಲಿಂಕ್ Important Direct Links ವಿಭಾಗದಲ್ಲಿ ನೀಡಲಾಗಿದೆ. ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ.
- ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಅನುಭವ ಇತ್ಯಾದಿ ದಾಖಲೆಗಳ ಛಾಯ ಪ್ರತಿಯನ್ನು ಅರ್ಜಿ ನಮೂನೆಗೆ ಲಗತ್ತಿಸಿ.
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಅಧಿಸೂಚನೆಯಲ್ಲಿ ತಿಳಿಸಿದಂತೆ ಪೋಸ್ಟ್ ಮಾಡಿ, ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ –ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM), ಕಸ್ತೂರಬಾ ರಸ್ತೆ, ಬೆಂಗಳೂರು-560001.
Important Direct Links:
| Official Notification PDF | Download |
| Application Form | Download |
| Official Website | https://vismuseum.gov.in/ |
| More Updates | KarnatakaHelp.in |
Hi
Hi