2025-26ನೇ ಸಾಲಿಗೆ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯಧನ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಉದ್ಯೋಗ ಕೈಗೊಳ್ಳುವ ಯೋಚನೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಸ್ವಂತ ಉದ್ಯೋಗವನ್ನು ಪ್ರೋತ್ಸಾಹಿಸಲು ಹಾಗೂ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲ ಹಾಗೂ ಸಹಾಯಧನ ದೊರೆಯಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ವೆಬ್ಸೈಟ್ https://kmdconline.karnataka.gov.in/Portal/home ಗೆ ಭೇಟಿ ನೀಡಿ. ಅಕ್ಟೋಬರ್ 16ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 16, 2025
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅರ್ಜಿದಾರರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
• ಅರ್ಜಿದಾರರು ಕರ್ನಾಟಕ ನಿವಾಸಿಯಾಗಿರಬೇಕು.
• ಅರ್ಜಿದಾರರ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 6 ಲಕ್ಷರೂ.ಗಳಿಗಿಂತ ಕಡಿಮೆ ಇರಬೇಕು.
• ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
• ಕಳೆದ 5 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವ ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಯೋಜನೆಯ ಅಡಿಯಲ್ಲಿ ಒದಗಿಸುವ ಸಾಲ ಸೌಲಭ್ಯದ ಮಾಹಿತಿ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 1 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಇದರಲ್ಲಿ 50% ಸಾಲ ಮತ್ತು 50% ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಆಗಿರುತ್ತದೆ.
• ಮೊದಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್https://kmdconline.karnataka.gov.in/Portal/home ಗೆ ಭೇಟಿ ನೀಡಿ.
• “ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ವಿವಿಧ ಯೋಜನೆಗಳು (2025-26)” ವಿಭಾಗದ ಕೆಳಗೆ ನೀಡಲಾಗಿರುವ – ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ನಂತರ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Vrutti Protsaha Loan Scheme Online Application Form 2025-26 Link