ಹಾವೇರಿ: ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 238 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು ಹಾಗೂ ಶಿಗ್ಗಾಂವ್ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 177 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ. ನ.17ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 17, 2025 ಖಾಲಿ ಇರುವ ಹುದ್ದೆಗಳ ವಿವರ: ✓ ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 03 ಅಂಗನವಾಡಿ ಕಾರ್ಯಕರ್ತೆ ಹಾಗೂ 17 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 20 ಹುದ್ದೆಗಳು ಖಾಲಿ ಇರುತ್ತದೆ.
✓ ಹಾನಗಲ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 13 ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 34 ಹುದ್ದೆಗಳು ಖಾಲಿ ಇರುತ್ತದೆ.
✓ ಹಾವೇರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 05 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 34 ಹುದ್ದೆಗಳು ಖಾಲಿ ಇರುತ್ತದೆ.
✓ ಹಿರೇಕೆರೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 12 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 39 ಹುದ್ದೆಗಳು ಖಾಲಿ ಇರುತ್ತದೆ.
✓ ರಾಣೇಬೆನ್ನೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 20 ಅಂಗನವಾಡಿ ಕಾರ್ಯಕರ್ತೆ ಹಾಗೂ 34 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 54 ಹುದ್ದೆಗಳು ಖಾಲಿ ಇರುತ್ತದೆ.
✓ ಸವಣೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 04 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 27 ಹುದ್ದೆಗಳು ಖಾಲಿ ಇರುತ್ತದೆ.
✓ ಶಿಗ್ಗಾಂವ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 04 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 30 ಹುದ್ದೆಗಳು ಖಾಲಿ ಇರುತ್ತದೆ.
ಶೈಕ್ಷಣಿಕ ಅರ್ಹತೆ: ನೇಮಕಾತಿ ಪ್ರಕಟಣೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ವಯೋಮಿತಿ: ಕನಿಷ್ಠ ವಯಸ್ಸಿನ ಮಿತಿ – 19 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಸಂಬಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ: ಉಲ್ಲೇಖಿಸಲಾಗಿರುವುದಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ • ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://karnemakaone.kar.nic.in/abcd/ ಗೆ ಭೇಟಿ ನೀಡಿ.
Wcd Haveri Anganwadi Recruitment 2025 • ಮೊದಲನೇ ಹಂತದಲ್ಲಿ – “ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನೀವು ಅರ್ಜಿ ಸಲ್ಲಿಸುತ್ತಿರುವ ಜಿಲ್ಲೆಯ ಹೆಸರು ಹಾಗೂ ಯೋಜನೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ವಿವರಗಳನ್ನು ನಮೂದಿಸಿ.
• ಎರಡನೇ ಹಂತದಲ್ಲಿ – ನಿಮ್ಮ ಭಾವಚಿತ್ರ ಹಾಗೂ ಸಹಿ ಅಪ್ಲೋಡ್ ಮಾಡಿ.
• ಮೂರನೇ ಹಂತದಲ್ಲಿ – ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ನಾಲ್ಕನೇ ಹಂತದಲ್ಲಿ – ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಮುದ್ರಿಸಿ.
ಹೆಚ್ಚಿನ ಮಾಹಿತಿಗಾಗಿ; ಅಭ್ಯರ್ಥಿಗಳು ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Important Direct Links:
anganvadi jobs my name gagana my stefi in 10 th pas