238 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
WCD Haveri Anganwadi Recruitment 2025 Notification
WCD Haveri Anganwadi Recruitment 2025 Notification

ಹಾವೇರಿ: ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 238 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು ಹಾಗೂ ಶಿಗ್ಗಾಂವ್ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 177 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ. ನ.17ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

4 thoughts on “238 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ”

  1. ಅಂಗನವಾಡಿ ಉದ್ಯೋಗ ಬೇಕು ನನ್ನ ಹೆಸರು ದಿವ್ಯ
    ನಾನು ಪದವಿ ಶಿಕ್ಷಣ ಮುಗಿದಿದೆ

    Reply

Leave a Comment