ಕೊಡಗು ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 54 ಅಂಗನವಾಡಿ ಕಾರ್ಯಕರ್ತೆ ಹಾಗೂ 161 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 215 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ ಗೆ ಭೇಟಿ ನೀಡಿ. ನವೆಂಬರ್ 13ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 13, 2025
ಖಾಲಿ ಇರುವ ಹುದ್ದೆಗಳ ವಿವರ:
✓ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 18 ಅಂಗನವಾಡಿ ಕಾರ್ಯಕರ್ತೆ ಹಾಗೂ 37 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 55 ಹುದ್ದೆಗಳು ಖಾಲಿ ಇದೆ.
✓ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 15 ಅಂಗನವಾಡಿ ಕಾರ್ಯಕರ್ತೆ ಹಾಗೂ 63 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 78 ಹುದ್ದೆಗಳು ಖಾಲಿ ಇದೆ.
✓ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 21 ಅಂಗನವಾಡಿ ಕಾರ್ಯಕರ್ತೆ ಹಾಗೂ 61 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 82 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ:
ನೇಮಕಾತಿ ಪ್ರಕಟಣೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿ ಹುದ್ದೆಗೆ – ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ವಯೋಮಿತಿ:
13-11-2025 ರಂತೆ;
ಕನಿಷ್ಠ ಮಿತಿ – 19 ವರ್ಷಗಳು
ಗರಿಷ್ಠ ಮಿತಿ – 35 ವರ್ಷಗಳು
ವಯೋಮಿತಿ ಸಡಿಲಿಕೆ; ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ದಾಖಲಾತಿ ಪರಿಶೀಲನೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
• ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಗೆ ಭೇಟಿ ನೀಡಿ.
• ಮೊದಲನೇ ಹಂತದಲ್ಲಿ – “ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನೀವು ಅರ್ಜಿ ಸಲ್ಲಿಸುತ್ತಿರುವ ಜಿಲ್ಲೆಯ ಹೆಸರು ಹಾಗೂ ಯೋಜನೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ವಿವರಗಳನ್ನು ನಮೂದಿಸಿ.
• ಎರಡನೇ ಹಂತದಲ್ಲಿ – ನಿಮ್ಮ ಭಾವಚಿತ್ರ ಹಾಗೂ ಸಹಿ ಅಪ್ಲೋಡ್ ಮಾಡಿ.
• ಮೂರನೇ ಹಂತದಲ್ಲಿ – ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.• ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ನಾಲ್ಕನೇ ಹಂತದಲ್ಲಿ – ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಮುದ್ರಿಸಿ.
ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ – 08276-200023 ಅಥವಾ 08276-282281 ಅನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಿಡಿಪಿಒ ತಿಳಿಸಿದ್ದಾರೆ.
Searching for job