ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪೋಷಣ್ ಅಭಿಯಾನ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ಹಾಗೂ ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ(Graduate) ಪೂರ್ಣಗೊಳಿಸಿರಬೇಕು.
ಕನಿಷ್ಠ ಎರಡು ವರ್ಷಗಳ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ಅಪ್ಲಿಕೇಶನ್ ಬೆಂಬಲದೊಂದಿಗೆ ಕೆಲಸ ಮಾಡುವ ವೃತ್ತಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಥಳೀಯರಾಗಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 21 ವರ್ಷಗಳು
ಗರಿಷ್ಠ ಮಿತಿ – 45 ವರ್ಷಗಳು
ವೇತನ:
ಮಾಸಿಕ 20,000ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಕೌಶಲ್ಯ ಪರೀಕ್ಷೆ(ಕಂಪ್ಯೂಟರ್ ಜ್ಞಾನ)
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಅಧಿಕೃತ ವೆಬ್ ಸೈಟ್ https://yadgir.nic.in/ ಗೆ ಭೇಟಿ ನೀಡಿ.
ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು.
ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ. ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಜುಲೈ 17 ರೊಳಗೆ ಸಲ್ಲಿಸಬಹುದು.
ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಕೋಣೆ ಸಂಖ್ಯೆ : ಸಿ-17. ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ. ಚಿತ್ತಾಪೂರ ರಸ್ತೆ, ಯಾದಗಿರಿ-585202
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:
ನಿಗದಿತ ನಮೂನೆಯಲ್ಲಿ ಅರ್ಜಿ
ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
ಅನುಭವ ಪ್ರಮಾಣ ಪತ್ರಗಳು.
ಕಂಪ್ಯೂಟರ್ ತರಬೇತಿ ಪಡಿದಿರುವ ಬಗ್ಗೆ ಪ್ರಮಾಣ ಪತ್ರ.
ತಹಸಿಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 08473-253739ಗೆ ಸಂಪರ್ಕಿಸಬಹುದು