ಯಾದಗಿರಿ| ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ

ಒಟ್ಟು 232 ಹುದ್ದೆಗಳು

Published on:

ಯಾದಗಿರಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ(61) ಮತ್ತು ಸಹಾಯಕಿ(171) ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತು ಯಾದಗಿರಿ ಜಿಲ್ಲಾಡಳಿತ ವೆಬ್‌ಸೈಟ್ https://yadgir.nic.in/ ಅಥವಾ ಜಿಲ್ಲಾ ಪಂಚಾಯತ್ ವೆಬ್‌ಸೈಟ್ https://zpyadgiri.karnataka.gov.in/ನಲ್ಲಿ ಲಭ್ಯವಿರುವ ಲಿಂಕ್‌ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನ – ಜುಲೈ 24
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ – ಆಗಸ್ಟ್‌ 24

ಹುದ್ದೆಗಳ ವಿವರ:

ಯೋಜನೆಯ ಹೆಸರುಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
ಶಹಾಪುರ1258
ಸುರಪುರ2458
ಯಾದಗಿರಿ1630
ಗುರುಮಿಟ್ಕಲ್0925
ಒಟ್ಟು61171 = 232

ಶೈಕ್ಷಣಿಕ ಅರ್ಹತೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ; ದ್ವಿತೀಯ ಪಿಯುಸಿ ಅರ್ಹತೆ ಹೊಂದಿರಬೇಕು. ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿರಬೇಕು.

ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ DSERT ಯಿಂದ ECCE ಡಿಪ್ಲೋಮಾ ಕೋರ್ಸ್, JOC ಕೋರ್ಸ್, NIT ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮಾ ನ್ಯೂರ್ಟಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೆಟ್ ಕೋರ್ಸ, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.

ಅಂಗನವಾಡಿ ಸಹಾಯಕಿ ಹುದ್ದೆಗೆ; ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು, ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುವುದು.

ವಿಶೇಷ ಸೂಚನೆ: ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮಾಂತರ ಪ್ರದೇಶ ಅಥವಾ ನಗರ ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿರುವುದು ಕಡ್ಡಾಯ. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ವಾಸಸ್ಥಳ ಪ್ರಮಾಣ ಪತ್ರವನ್ನು ಪೂರಕ ದಾಖಲೆಗಳಾದ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳೊಂದಿಗೆ ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ರಿಂದ ಗರಿಷ್ಠ 35 ವರ್ಷದ ವಯಸ್ಸಿನವಾರಾಗಿರಬೇಕು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

  • ಮೆರಿಟ್‌ ಪಟ್ಟಿ(ಗಳಿಸಿದ ಅಂಕಗಳ ಆಧಾರದ ಮೇಲೆ)
  • ದಾಖಲಾತಿ ಪರಿಶೀಲನೆ

ಸಂಬಳ:

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು, ಸರ್ಕಾರದ ನಿಯಮಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

ಯಾದಗಿರ ಜಿಲ್ಲಾಡಳಿತ ವೆಬ್‌ಸೈಟ್ https://yadgir.nic.in/ ಅಥವಾ ಜಿಲ್ಲಾ ಪಂಚಾಯತ್ ವೆಬ್‌ಸೈಟ್ https://zpyadgiri.karnataka.gov.in/ನಲ್ಲಿ ಲಭ್ಯವಿರುವ ಸೇವಾಸಿಂಧು ಪೋರ್ಟಲ್ ಲಿಂಕ್‌‌(https://sevasindhuservices.karnataka.gov.in/directApply.do?serviceId=2606)ಗೆ ಭೇಟಿ ನೀಡಿ. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಅಪ್ಲೋಡ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

Wcd Yadgir District Anganwadi Notification 2026
ಆನ್‌ಲೈನ್‌ ಅರ್ಜಿ ನಮೂನೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಿಳಾಸ:

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಗಂಜ್ ಏರಿಯಾ, ಶಹಾಪೂರ ದೂರವಾಣಿ ಸಂಖ್ಯೆ: 08479–243254/9019757399

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹಳೆ ಕೋರ್ಟ ಕಟ್ಟಡ, ಜೈಲ್ ಹತ್ತಿರ, ಸುರಪುರ ದೂರವಾಣಿ ಸಂಖ್ಯೆ: 08443-256808/9972219500

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, 1ನೇ ಮಹಡಿ ಸ್ತ್ರೀ ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ಯಾದಗಿರಿ ದೂರವಾಣಿ ಸಂಖ್ಯೆ: 08473-252265/9902878603

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, 1ನೇ ಮಹಡಿ, ಗುಮಡಲಾ ಕಾಂಪ್ಲೇಸ್, ಬಸ್ ನಿಲ್ದಾಣದ ಮುಂದುಗಡೆ, ಗುರುಮಠಕಲ್ ದೂರವಾಣಿ ಸಂಖ್ಯೆ: 08473-225035/9902878603

Important Direct Links:

Official Notification PDFDownload
Online Application Form LinkApply Now
Official Websitezpyadgiri.karnataka.gov.in
yadgir.nic.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

5 thoughts on “ಯಾದಗಿರಿ| ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ”

Leave a Comment