ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2025 ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದೆ.

ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ರಾಜ್ಯದ ವಿವಿಧ ಕಾಲೇಜುಗಳು/ಸಂಸ್ಥೆಗಳಲ್ಲಿ ವಿವಿಧ ಕೋರ್ಸು ಹಾಗೂ  ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿರುತ್ತೆ.

ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 23-01-2025 ಆನ್‌ಲೈನ್‌ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-02-2025

ಪ್ರಮುಖ ದಿನಾಂಕಗಳು 

ಅರ್ಹತಾ ಮಾನದಂಡ:

12ನೇ ತರಗತಿ / ತತ್ಸಮಾನ ಪರೀಕ್ಷೆಯಲ್ಲಿ ಭೌತಶಾಸ್ತ್ರ, ಗಣಿತ ವಿಷಯಗಳ ಜೊತೆಗೆ ರಸಾಯನಶಾಸ್ತ್ರ / ಬಯೋ-ಟೆಕ್ನಾಲಜಿ / ಜೀವಶಾಸ್ತ್ರ / ಎಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ಸೈನ್ಸ್‌ಗಳಲ್ಲಿ ಯಾವುದಾದರೂ ಒಂದನ್ನು ಐಚ್ಛಿಕ ವಿಷಯವನ್ನಾಗಿ ಹಾಗೂ ಇಂಗ್ಲೀಷನ್ನು ಒಂದು ಭಾಷಾ ವಿಷಯವನ್ನಾಗಿ ತೆಗೆದುಕೊಂಡು, ಅರ್ಹತಾ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಒಟ್ಟಾರೆ ಕನಿಷ್ಠ ಶೇಕಡ 45ರಷ್ಟು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕರ್ನಾಟಕ CET 2025 ಅಧಿಕೃತ ವೆಬ್‌ಸೈಟ್ cetonline.karnataka.gov.inಗೆ ಭೇಟಿ ನೀಡಿ.