2025-26ನೇ ಸಾಲಿಗೆ ಪಶ್ಚಿಮ ರೈಲ್ವೆ (WR)ನಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕ್ರೀಡಾ ಕೋಟಾ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶ ಜು.27ರಂದು ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್-ಸಿ 21, ಗ್ರೂಪ್-ಡಿ 43 ಸೇರಿ ಒಟ್ಟು 64 ಹುದ್ದೆಗಳಿಗೆ ಕ್ರೀಡಾಕೋಟಾದಡಿಯಲ್ಲಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCWR ಅಧಿಕೃತ ವೆಬ್ಸೈಟ್ https://rrc-wr.com/sports/Login/Indexಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
• Level 5/4 ಹುದ್ದೆಗಳಿಗೆ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
• Level 3/2 ಹುದ್ದೆಗಳಿಗೆ – ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ (+2 ಹಂತ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೆಟ್ರಿಕ್ಯುಲೇಷನ್(10th) ಪಾಸ್ ಮತ್ತು ಆಕ್ಟ್ ಅಪ್ರೆಂಟಿಸ್ಶಿಪ್ ಪೂರ್ಣಗೊಳಿಸಿದ ಕೋರ್ಸ್. ಅಥವಾ ಮೆಟ್ರಿಕ್ಯುಲೇಷನ್ ಪಾಸ್(10th) ಜೊತೆಗೆ NCVT/SCVT ಅನುಮೋದಿಸಿದ ITI ಅಥವಾ ಮೆಟ್ರಿಕ್ಯುಲೇಷನ್(10th) ಪಾಸ್ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
• Level 1 ಹುದ್ದೆಗಳಿಗೆ – ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿಯ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಐಟಿಐ ಅಥವಾ ಡಿಪ್ಲೊಮಾ ಅಥವಾ ತತ್ಸಮಾನ ಅಥವಾ NCVT ಯಿಂದ ನೀಡಲಾದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (NAC) ಪಡೆದಿರಬೇಕು.
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಆಯ್ಕೆ ವಿಧಾನ:
ಪ್ರಾಯೋಗಿಕ ಪರೀಕ್ಷೆ
ಆಟದ ಕೌಶಲ್ಯ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಅಲ್ಪಸಂಖ್ಯಾತ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 250ರೂ.