2025-26ನೇ ಸಾಲಿಗೆ ಪಶ್ಚಿಮ ರೈಲ್ವೆ (WR)ನಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕ್ರೀಡಾ ಕೋಟಾ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶ ಜು.27ರಂದು ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್-ಸಿ 21, ಗ್ರೂಪ್-ಡಿ 43 ಸೇರಿ ಒಟ್ಟು 64 ಹುದ್ದೆಗಳಿಗೆ ಕ್ರೀಡಾಕೋಟಾದಡಿಯಲ್ಲಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCWR ಅಧಿಕೃತ ವೆಬ್ಸೈಟ್ https://rrc-wr.com/sports/Login/Indexಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜುಲೈ 30, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 29, 2025
ಶೈಕ್ಷಣಿಕ ಅರ್ಹತೆ:
• Level 5/4 ಹುದ್ದೆಗಳಿಗೆ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
• Level 3/2 ಹುದ್ದೆಗಳಿಗೆ – ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ (+2 ಹಂತ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೆಟ್ರಿಕ್ಯುಲೇಷನ್(10th) ಪಾಸ್ ಮತ್ತು ಆಕ್ಟ್ ಅಪ್ರೆಂಟಿಸ್‌ಶಿಪ್ ಪೂರ್ಣಗೊಳಿಸಿದ ಕೋರ್ಸ್. ಅಥವಾ ಮೆಟ್ರಿಕ್ಯುಲೇಷನ್ ಪಾಸ್(10th) ಜೊತೆಗೆ NCVT/SCVT ಅನುಮೋದಿಸಿದ ITI ಅಥವಾ ಮೆಟ್ರಿಕ್ಯುಲೇಷನ್(10th) ಪಾಸ್ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
• Level 1 ಹುದ್ದೆಗಳಿಗೆ – ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿಯ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಐಟಿಐ ಅಥವಾ ಡಿಪ್ಲೊಮಾ ಅಥವಾ ತತ್ಸಮಾನ ಅಥವಾ NCVT ಯಿಂದ ನೀಡಲಾದ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ (NAC) ಪಡೆದಿರಬೇಕು.
ವಯೋಮಿತಿ:
01-01-2026 ರಂತೆ;
- ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಆಯ್ಕೆ ವಿಧಾನ:
- ಪ್ರಾಯೋಗಿಕ ಪರೀಕ್ಷೆ
- ಆಟದ ಕೌಶಲ್ಯ ಪರೀಕ್ಷೆ
- ದೈಹಿಕ ಸಾಮರ್ಥ್ಯ ಪರೀಕ್ಷೆ
ಅರ್ಜಿ ಶುಲ್ಕ:
- ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಅಲ್ಪಸಂಖ್ಯಾತ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 250ರೂ.
- ಸಾಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ – 500ರೂ.
ಇದನ್ನೂ ಓದಿ: ಕೇಂದ್ರ ರೈಲ್ವೆ (CR) ಕ್ರೀಡಾಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆ ಪ್ರಾರಂಭ
How to Apply for Western Railway Sports Quota Vacancy 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
• RRCWR ಅಧಿಕೃತ ವೆಬ್ಸೈಟ್ https://rrc-wr.com/sports/Login/Index ಗೆ ಭೇಟಿ ನೀಡಿ.
• ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• *2025-26ನೇ ಸಾಲಿಗೆ ಮುಕ್ತ ಜಾಹೀರಾತು ಕ್ರೀಡಾ ಕೋಟಾದ ಅಡಿಯಲ್ಲಿ ನೇಮಕಾತಿ.* – ಅರ್ಜಿ ನಮೂನೆ ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | rrc-wr.com |
| More Updates | KarnatakaHelp.in |
Yes
Vijayanagar