ಪಿಎಂ ಶ್ರೀ (PM SHRI) ಯೋಜನೆ ಭಾರತದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಮೇಲ್ದರ್ಜೆಗೇರಿಸುವ ಒಂದು ಮಹತ್ವದ ಯೋಜನೆವಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಸರಿಸುತ್ತದೆ ಮತ್ತು ದೇಶಾದ್ಯಂತ 14,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.
ಈ ಯೋಜನ ಮೂಲಕ PM SHRI ಶಾಲೆಗಳು (PM ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಎಂದು ಕರೆಯಲಾಗುತ್ತದೆ. ಕೇಂದ್ರ ಸರ್ಕಾರದ ಕೇಂದ್ರ ಶಿಕ್ಷಣ ಸಚಿವಾಲಯವು ಈ ಯೋಜನೆಯನ್ನು ಪ್ರಾರಂಭಿಸಿತು. ಇದರ ಅಡಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅನ್ವಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 14,500 ಶಾಲೆಗಳನ್ನು ಅಭಿವೃದ್ಧಿಪಡಿಸುವ ಮೂಲಕ 5 ವರ್ಷಗಳ ಅವಧಿಯಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಯೋಜನೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ.