ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆ.
ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ವಿಧವಾ ವೇತನ ಯೋಜನೆ(Widow Pension Scheme)ಯನ್ನು 1984ರ ಏಪ್ರಿಲ್ 1ರಿಂದ ಕಾರ್ಯಗತ ಮಾಡಲಾಗಿದೆ. ಪ್ರಸ್ತುತ 17 ಲಕ್ಷ ವಿಧವೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಪಿಂಚಣಿ ಮೊತ್ತದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.