Widow Pension Scheme: ವಿಧವಾ ವೇತನ ಯೋಜನೆ, ಇಲ್ಲಿದೆ ಸಂಪೂರ್ಣ ಮಾಹಿತಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

Widow Pension Scheme Karnataka
Widow Pension Scheme Karnataka

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆ.

ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ವಿಧವಾ ವೇತನ ಯೋಜನೆ(Widow Pension Scheme)ಯನ್ನು 1984ರ ಏಪ್ರಿಲ್‌ 1ರಿಂದ ಕಾರ್ಯಗತ ಮಾಡಲಾಗಿದೆ. ಪ್ರಸ್ತುತ 17 ಲಕ್ಷ ವಿಧವೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಪಿಂಚಣಿ ಮೊತ್ತದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Eligibility for Widow Pension Scheme Karnataka

ಯೋಜನೆಯ ಅರ್ಹತಾ ಮಾನದಂಡ:

  • ವಿಧವೆ ಅಂದರೆ, ಪತಿಯ ಜೀವಿಸಿಲ್ಲದ ಅಥವಾ ಕಾನೂನು ರೀತ್ಯಾ ಮೃತಪಟ್ಟಿರುವನೆಂದು ಭಾವಿಸುವವನ ಪತ್ನಿ.
  • ವಾರ್ಷಿಕ ಆದಾಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 32 ಸಾವಿರಕ್ಕಿಂತ ಕಡಿಮೆ ಇರಬೇಕು.
  • ವಿಧವೆಯ ವಯಸ್ಸು 18 ರಿಂದ 64 ವರ್ಷಗಳ ನಡುವೆ ಇರಬೇಕು.
  • ಪತಿಯ ಮರಣದ ನಂತರ ವಿಧವೆಯು ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗಲು ನಿರ್ಧರಿಸಿದರೆ, ಅವರು ಯೋಜನೆಯಡಿಯಲ್ಲಿ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಮೃತರಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗಧಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವೆಯ ವಿಧವಾ ವೇತನವನ್ನು ಪಡೆಯಬಹುದು.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ವಾಸಸ್ಥಳ ದೃಡೀಕರಣ ಪತ್ರ
  • ವಯಸ್ಸಿನ ದೃಢೀಕೃತ ಪತ್ರ
  • ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು
  • ಆಧಾರ್ ಕಾರ್ಡ್

ಪಿಂಚಣಿ ಮೊತ್ತ(Pension Amount Details):

• ವಿಧವಾ ವೇತನ ಯೋಜನೆಯಲ್ಲಿ ಪ್ರತಿ ತಿಂಗಳು ಫಲಾನುಭವಿಯ ಖಾತೆಗೆ 800 ರೂಗಳನ್ನು ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: Indira Gandhi Pension Scheme: ವೃದ್ಧಾಪ್ಯ ಪಿಂಚಣಿ ಯೋಜನೆ, ಕುಳಿತಲ್ಲೇ ಪ್ರತಿ ತಿಂಗಳು ಹಣ ಪಡೆಯಿರಿ, ಈಗಲೇ ತಿಳಿಯಿರಿ!

How to Apply for Widow Pension Scheme Karnataka?

ವಿಧವಾ ವೇತನ ಯೋಜನೆಗೆ ಫಲಾನುಭವಿಗಳು ಆಫ್ ಲೈನ್ ಮೂಲಕ ವಾಸಸ್ಥಳ ವ್ಯಾಪ್ತಿಯ ಅಟಲ್‌ ಜೀ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.

Important Direct Links:

Official Websitedssp.karnataka.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment