Yadgir Anganwadi Recruitment 2024: ಯಾದಗಿರಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Follow Us:

ಯಾದಗಿರಿ ಜಿಲ್ಲೆಯ 4 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯಾದಗಿರಿ ಜಿಲ್ಲೆಯ ಶಾಪುರ, ಸುರಪುರ, ಯಾದಗಿರಿ, ಗುರುಮಠಕಲ್ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 470 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತೆ. ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ 159 ಹುದ್ದೆಗಳು, ಅಂಗನವಾಡಿ ಸಹಾಯಕಿ 311 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಮಹಿಳೆಯರಲ್ಲಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಬಯಸುತ್ತಿರುವ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

Yadgir Anganwadi Recruitment 2024
Yadgir Anganwadi Recruitment 2024

ಆಸಕ್ತ ಮತ್ತು ಅರ್ಹ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಸೆಪ್ಟಂಬರ್ 13, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ Yadgir Anganwadi Recruitment 2024 ಕುರಿತು ಹೆಚ್ಚಿನ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದ್ದು ಕೊನೆವರೆಗೂ ಓದಿ, ನಂತರ ಕೆಳಗೆ ನೀಡಲಾದ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Shortview of Yadagiri Anganwadi Notification 2024

Organization Name – Women & Child Development (WCD)
Post Name – Anganwadi Worker and Helper
Total Vacancy – 470
Application Process: Online
Job Location – Yadgir

ಪ್ರಮುಖ ದಿನಾಂಕಗಳು:

  • ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –13 ಆಗಸ್ಟ್ 2024
  • ಅರ್ಜಿ ಸಲಿಸಲು ಕೊನೆಯ ದಿನಾಂಕ –13 ಸೆಪ್ಟೆಂಬರ್ 2024

ಖಾಲಿ ಇರುವ ಹುದ್ದೆಗಳ ವಿವರ:

ಶಹಾಪುರ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 48
  • ಅಂಗನವಾಡಿ ಸಹಾಯಕಿ ಹುದ್ದೆಗಳು – 76

ಸುರಪುರ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 80
  • ಅಂಗನವಾಡಿ ಸಹಾಯಕಿ ಹುದ್ದೆಗಳು – 141

ಯಾದಗಿರಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 17
  • ಅಂಗನವಾಡಿ ಸಹಾಯಕಿ ಹುದ್ದೆಗಳು – 37

ಗುರುಮಠಕಲ್ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 14
  • ಅಂಗನವಾಡಿ ಸಹಾಯಕಿ ಹುದ್ದೆಗಳು – 57

ವಿದ್ಯಾರ್ಹತೆ:

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು.
  • ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ – ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ
  • ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

Also Read: BMRCL Assistant Security Officer Vacancy 2024: ಸಹಾಯಕ ಭದ್ರತಾ ಅಧಿಕಾರಿಗಳ (ASO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

How to Apply Yadgir Anganwadi Recruitment 2024

ಅರ್ಜಿ ಸಲ್ಲಿಸುವ ವಿಧಾನ

  • ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ ಗೆ karnemakaone.kar.nic.in ಭೇಟಿ ನೀಡಿ
  • ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ:

ದೂರವಾಣಿ ಸಂಖ್ಯೆಗಳು

  • ಶಾಹಾಪುರ – 08479-243254/ 9591611676
  • ಸುರಪುರ – 08443-256808/ 9449708988
  • ಯಾದಗಿರಿ – 08473-252265/ 9980178168
  • ಗುರುಮಠಕಲ್ – 08473-225035/ 9902878603 ಸಂಪರ್ಕಿಸಬಹುದು‌.

Important Direct Links:

Official Notification PDFDownload
Guidelines PDFDownload
Online Application Form LinkApply Link Here
More UpdatesKarnataka Help.in

Leave a Comment