ಯಾದಗಿರಿ: ಜಿಲ್ಲೆಯ ನ್ಯಾಯಾಲಗಳಲ್ಲಿ ಕಲ್ಯಾಣ ಕರ್ನಾಟಕ(ಸ್ಥಳೀಯ)ವೃಂದದ ಪ್ರೋಸೆಸ್ ಸರ್ವರ್(ಆದೇಶ ಜಾರಿಕಾರ) ಮತ್ತು ಪ್ಯೂನ್(ಸೇವಕ) ಹುದ್ದೆಗಳ ನೇರ ನೇಮಕಾತಿಗಾಗಿ ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಅಧಿಸೂಚನೆ ಪ್ರಕಟಿಸಿದೆ.
ಪ್ರೋಸೆಸ್ ಸರ್ವರ್ 09 ಸ್ಥಾನ, ಪ್ಯೂನ್ 05 ಸ್ಥಾನ ಸೇರಿದಂತೆ ಒಟ್ಟು 14 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲಿದೆ. ಎಸ್ಸೆಸ್ಸೆಲ್ಸಿ ಓದಿದವರಿಗೆ ಇದೊಂದು ಉತ್ತಮ ಅವಕಾಶ, ಆಸಕ್ತರು ಏ.12ರೊಳಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/online-recruitment/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 13, 2026
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 12, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 13, 2026
ಶೈಕ್ಷಣಿಕ ಅರ್ಹತೆ:
✓ ಪ್ರೋಸೆಸ್ ಸರ್ವರ್ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಲಘು ವಾಹನ ಚಾಲನಾ ಪರವಾನಿಗೆ ಪತ್ರ (Driving Licence) ಹೊಂದಿರುವ ಅಭ್ಯರ್ಥಿಗಳಿಗೆ ಮೊದಲು ಆದ್ಯತೆ ನೀಡಲಾಗುತ್ತದೆ.
✓ ಪ್ಯೂನ್ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷೆ ಓದಲು ಬರೆಯಲು ತಿಳಿದಿರಬೇಕು.
ವಯೋಮಿತಿ:
12-04-2026 ರಂತೆ;
• ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 38 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 40 ವರ್ಷಗಳು.
ವಯೋಮಿತಿ ಸಡಿಲಿಕೆ: ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 05ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳು.
ಆಯ್ಕೆ ವಿಧಾನ:
- ಅರ್ಹತಾ ಪರೀಕ್ಷೆ
- ಸಂದರ್ಶನ
- ಅಂತಿಮ ಆಯ್ಕೆ
ಸಂಬಳ:
ಪ್ರೋಸೆಸ್ ಸರ್ವರ್ ಹುದ್ದೆಗೆ – ₹31,775-61,300
ಪ್ಯೂನ್ ಹುದ್ದೆಗೆ – ₹27,000-46,675
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ₹100
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ₹100
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/online-recruitment/ ಕ್ಕೆ ಭೇಟಿ ನೀಡಿ.
• ಬಳಿಕ *ಆನ್ ಲೈನ್ ನೇಮಕಾತಿ* ಕೆಳಗೆ ನೀಡಲಾಗಿರುವ “ಆನ್‌ಲೈನ್ ಅಪ್ಲಿಕೇಶನ್” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ “ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ಸಾಮಾನ್ಯ ಸೂಚನೆಗಳನ್ನು” ಎಚ್ಚರಿಕೆಯಿಂದ ಓದಬೇಕು.
• ಮಾನ್ಯವಾದ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ನಮೂದಿಸಿ ಮುಂದುವರೆಯಿರಿ.
• ಇದಾದ ಬಳಿಕ ಅಭ್ಯರ್ಥಿಯ ಭಾವಚಿತ್ರ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
• ತದನಂತರ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿಯಲ್ಲಿ ಕೋರಲಾಗುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Process Server Official Notification PDF | Download |
| Peon Official Notification PDF | Download |
| Process Server Online Form Link | Apply Now |
| Peon Online Form Link | Apply Now |
| Official Website | yadgir.dcourts.gov.in |
| More Updates | KarnatakaHelp.in |
Mahesha nani yadagere hudaga nnage e avakasha shegadeku sir
Mahesha yadagere
̤