ಯಾದಗಿರಿ: ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಅಧೀನದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ (ಸ್ಥಳೀಯ ವೃಂದ) ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆದೇಶ ಜಾರಿಕಾರ 09 ಹುದ್ದೆಗಳು, ಬೆರಳಚ್ಚುಗಾರ 05 ಹುದ್ದೆಗಳು, ಸೇವಕ(ಪ್ಯೂನ್) 05 ಹುದ್ದೆಗಳು ಹಾಗೂ ಬೆರಳಚ್ಚು ನಕಲುಗಾರ 04 ಹುದ್ದೆಗಳು ಸೇರಿದಂತೆ ಒಟ್ಟು 23 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ(https://yadgir.dcourts.gov.in/online-recruitment/)ದಲ್ಲಿ ಲಭ್ಯವಿರುವ ಲಿಂಕ್ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಆಗಸ್ಟ್ 31
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30(ರಾತ್ರಿ 11:59 ರವರೆಗೆ)
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಅಕ್ಟೋಬರ್ 01
ಶೈಕ್ಷಣಿಕ ಅರ್ಹತೆ:
ಸೇವಕರು(ಪ್ಯೂನ್) ಹುದ್ದೆಗೆ; ಕರ್ನಾಟಕ ಸರ್ಕಾರದ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ಆದೇಶ ಜಾರಿಕಾರ ಹುದ್ದೆಗೆ; ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕರ್ನಾಟಕ ಸರ್ಕಾರದ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಹೆಚ್ಚುವರಿ ಆದ್ಯತೆ (ಅರ್ಹತೆ): ಲಘುವಾಹನ ಚಾಲನಾ ಪರವಾನಿಗೆ (Driving Licence) ಹೊಂದಿರುವ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು
ಬೆರಳಚ್ಚುಗಾರ ಹುದ್ದೆಗೆ; ದ್ವಿತೀಯ ಪಿಯುಸಿ (2nd PUC) ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಪರೀಕ್ಷೆ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರ ಹುದ್ದೆಗೆ; ದ್ವಿತೀಯ ಪಿಯುಸಿ (2nd PUC) ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿಯ ಬೆರಳಚ್ಚು ಪರೀಕ್ಷೆ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು
- ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳು
(ಗಮನಿಸಿ: ಸರ್ಕಾರದ ಆದೇಶದನ್ವಯ ನೇರ ನೇಮಕಾತಿಯ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ಇದಲ್ಲದೆ ಮಾಜಿ ಸೈನಿಕರು, ಅಂಗವಿಕಲರು, ವಿಧವೆಯರು ಮತ್ತು ಜೀತ ಕಾರ್ಮಿಕರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ).
ಆಯ್ಕೆ ಪ್ರಕ್ರಿಯೆ:
ಸೇವಕ(ಪ್ಯೂನ್) ಮತ್ತು ಆದೇಶ ಜಾರಿಕಾರ ಹುದ್ದೆಗೆ; ಅರ್ಹತಾ ಪರೀಕ್ಷೆಯಲ್ಲಿ (SSLC) ಅಥವಾ ತತ್ಸಮಾನ ಅರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಮಾಡಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ; ಅಭ್ಯರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ/ಗಣಕಯಂತ್ರದ ಮೇಲೆ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಸಾಮರ್ಥ್ಯ ಪರೀಕ್ಷೆಯು ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ತಲಾ ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಉತ್ತೀರ್ಣರಾಗಲು ಎರಡರಲ್ಲೂ ಕನಿಷ್ಠ 50 ಅಂಕಗಳನ್ನು ಪಡೆಯಬೇಕು. ತದನಂತರ 10 ಅಂಕಗಳ ಸಂದರ್ಶನವಿರುತ್ತದೆ.
ಸಂಬಳ:
ಸೇವಕ(Peons) ಹುದ್ದೆಯ ವೇತನ ಶ್ರೇಣಿ; ರೂ.27,000-650-29,600-725-32,500-800-35,700-900-39,300-1,000-43,300-1,125-46,675 ಮತ್ತು ಇತರೆ ಭತ್ಯೆಗಳು.
ಆದೇಶ ಜಾರಿಕಾರ ಹುದ್ದೆಯ ವೇತನ ಶ್ರೇಣಿ; ರೂ.31,775-725-32,500-800-35,700-900-39,300-1,000-43,300-1,125-47,800-1,250-52,800-1,375-58,300-1,500-61,300 ಮತ್ತು ಇತರ ಭತ್ಯೆಗಳು.
ಬೆರಳಚ್ಚುಗಾರ ಹುದ್ದೆಯ ವೇತನ ಶ್ರೇಣಿ; ರೂ.34,100 -800-35,700-900-39,300-1,000-43,300-1,125-47,800-1,250-52,800-1,375-58,300-1,500-64,300-1,650-67,600 ಮತ್ತು ಇತರೆ ಭತ್ಯೆಗಳು.
ಬೆರಳಚ್ಚು ನಕಲುಗಾರ ಹುದ್ದೆಯ ವೇತನ ಶ್ರೇಣಿ; ರೂ.34,100-800-35,700-900-39,300-1,000-43,300-1,125-47,800- 1,250-52,800-1,375-58,300-1,500-64,300-1,650-67,600 ಮತ್ತು ಇತರೆ ಭತ್ಯೆಗಳು.
ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:
- ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200/-
- ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.50/-
ಪಾವತಿ ವಿಧಾನ: ನಿಗದಿತ ಶುಲ್ಕವನ್ನು ನ್ಯಾಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ ಪಾವತಿ (Net banking/Credit Card/Debit Card/UPI) ಸೌಲಭ್ಯದ ಮೂಲಕ ಮಾತ್ರ ಪಾವತಿಸಬೇಕು. ಚಲನ್, ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್ ಅಥವಾ ಮನಿ ಆರ್ಡರ್ಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/online-recruitment/ದಲ್ಲಿ “ನೇಮಕಾತಿ” ವಿಭಾಗದಡಿ ನೀಡಲಾದ ಹುದ್ದೆಗಳವಾರು ಆನ್ಲೈನ್ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಲಿಂಕ್ಗಳು:
| ಅಧಿಕೃತ ಅಧಿಸೂಚನೆ(ಪ್ಯೂನ್) ಪಿಡಿಎಫ್ | ಡೌನ್ಲೋಡ್ ಮಾಡಿ |
| ಅಧಿಕೃತ ಅಧಿಸೂಚನೆ(ಆದೇಶಜಾರಿಕಾರ) ಪಿಡಿಎಫ್ | ಡೌನ್ಲೋಡ್ ಮಾಡಿ |
| ಅಧಿಕೃತ ಅಧಿಸೂಚನೆ(ಬೆರಳಚ್ಚುಗಾರ) ಪಿಡಿಎಫ್ | ಡೌನ್ಲೋಡ್ ಮಾಡಿ |
| ಅಧಿಕೃತ ಅಧಿಸೂಚನೆ(ಬೆರಳಚ್ಚು ನಕಲುಗಾರ) ಪಿಡಿಎಫ್ | ಡೌನ್ಲೋಡ್ ಮಾಡಿ |
| ಬೆರಳಚ್ಚು ನಕಲುಗಾರ ಆನ್ಲೈನ್ ಅರ್ಜಿ ಲಿಂಕ್ | ಅರ್ಜಿ ಸಲ್ಲಿಸಿ |
| ಬೆರಳಚ್ಚುಗಾರ ಆನ್ಲೈನ್ ಅರ್ಜಿ ಲಿಂಕ್ | ಅರ್ಜಿ ಸಲ್ಲಿಸಿ |
| ಆದೇಶಜಾರಿಕಾರ ಆನ್ಲೈನ್ ಅರ್ಜಿ ಲಿಂಕ್ | ಅರ್ಜಿ ಸಲ್ಲಿಸಿ |
| ಪ್ಯೂನ್ ಆನ್ಲೈನ್ ಅರ್ಜಿ ಲಿಂಕ್ | ಅರ್ಜಿ ಸಲ್ಲಿಸಿ |
| ಅಧಿಕೃತ ಜಾಲತಾಣ | yadgir.dcourts.gov.in |
| ಮತ್ತಷ್ಟು ಸುದ್ದಿಗಾಗಿ | ಕರ್ನಾಟಕಹೆಲ್ಪ್.ಇನ್ |
ಮಲ್ಲಿಕಾರ್ಜುನ ಬಮ್ಮಹಳ್ಳಿ