ಜಿಲ್ಲಾ ಪಂಚಾಯತ್ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಲೂಕು IEC ಸಂಯೋಜಕ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ.
ತಾಲೂಕು IEC ಸಂಯೋಜಕ ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯತಿಯ ಅಂತರ್ಜಾಲ https://yadgir.nic.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬಿ.ಕೆ.ಆರ್. ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – 30-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 14-07-2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ(MJMC) ಅಥವಾ ಸಮೂಹ ಸಂವಹನದಲ್ಲಿ ಡಿಪ್ಲೊಮಾ ಅಥವಾ ಸಂಬಂಧಿತ ವಿಷಯಗಳೊಂದಿಗೆ ಯಾವುದೇ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ. ಮೇಲಿನವುಗಳ ಅನುಪಸ್ಥಿತಿಯಲ್ಲಿ ಕಂಪ್ಯೂಟರ್ ಜ್ಞಾನದೊಂದಿಗೆ ಯಾವುದೇ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಜೊತೆಗೆ ಕನಿಷ್ಠ 2 ರಿಂದ 3 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 21 ವರ್ಷಗಳು
ಗರಿಷ್ಠ ಮಿತಿ – 45 ವರ್ಷಗಳು
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ:
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆ ತಿಳಿದಿರಬೇಕು ಮತ್ತು ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
ನೇಮಕಾತಿ ಅವಧಿಯು 11 ತಿಂಗಳಾಗಿದ್ದು, ಕಾರ್ಯಕ್ಷಮತೆ ಪರಿಶೀಲಿಸಿ ಮುಂದುವರೆಸಲಾಗುವುದು.
ತಂಡದಲ್ಲಿಕಾರ್ಯ ನಿರ್ವಹಿಸಲು ಸಾಮರ್ಥ್ಯ ಹೊಂದಿರಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ನೇರವಾಗಿ ಸಲ್ಲಿಸಲು ಅವಕಾಶವಿಲ್ಲ.
ನೇಮಕಾತಿಯಾದ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿಯೋಜಿಸಿದ ಸ್ಥಳದಲ್ಲಿ ಕಾರ್ಯ ನಿರ್ವಹಿಸಬೇಕು.
How to Apply for Yadgir (Hunasagi) Nrega Taluk IEC Coordinator Vacancy 2025
ಅರ್ಜಿ ಸಲ್ಲಿಸುವ ವಿಧಾನ;
ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ ಸೈಟ್ನಲ್ಲಿ ಲಭ್ಯವಿರುವ https://nicforms.nic.in/nicforms_designer/nic_form_selector.php?form_id=enRhYmxlNjg1Yjk3MDRkNzYwZTIwMjUwNjI1MzY2 ಲಿಂಕ್
ಗೆ ಭೇಟಿ ನೀಡಿ.
ಅರ್ಜಿಯಲ್ಲಿ ಕೇಳಲಾಗುಸುವ ಸ್ವ ವಿವರ, ಅಗತ್ಯ ಮಾಹಿತಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಳ್ಳಿ.