ರಕ್ಷಣಾ ಸಚಿವಾಲಯ ಅಧೀನದ ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಅಪ್ರೆಂಟಿಸ್ ಕಾಯ್ದೆ 1961ರಡಿ 59ನೇ ಬ್ಯಾಚ್ ಮೂಲಕ ಟ್ರೇಡ್ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಐಟಿಐ ವರ್ಗ(2843), ನಾನ್ ಐಟಿಐ ವರ್ಗ(1136) ಸೇರಿದಂತೆ ಸುಮಾರು 3979 ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ನೆಲೆಗೊಂಡಿರುವ ಭಾರತೀಯ ಆರ್ಡಿನೆನ್ಸ್ ಮತ್ತು ಆರ್ಡನೆನ್ಸ್ ಸಲಕರಣೆ ಕಾರ್ಖಾನೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು, ತರಬೇತಿ ನೀಡಲಿದೆ. 10ನೇ ಹಾಗೂ ಐಟಿಐ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾ.03ರೊಳಗೆ ಅಧಿಕೃತ ಪೋರ್ಟಲ್ https://www.recruit-gov.com/Yantra2026/index.phpಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಫೆಬ್ರವರಿ 01, 2026
- ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 03, 2026
ಶೈಕ್ಷಣಿಕ ಅರ್ಹತೆ:
✓ ನಾನ್ ಐಟಿಐ ವರ್ಗದ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಉತ್ತೀರ್ಣರಾಗಿರಬೇಕು.
✓ ಐಟಿಐ ವರ್ಗದ ಹುದ್ದೆಗೆ; ಅಭ್ಯರ್ಥಿಗಳು NCVT/SCVT ಯಿಂದ ನೀಡಲಾದ ಆಯಾ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾದ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 14 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ವಯೋಮಿತಿ ಸಡಿಲಿಕೆ: ಯಂತ್ರ ಇಂಡಿಯಾ ಲಿಮಿಟೆಡ್ ಮಾನದಂಡಗಳ ಅನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- 10ನೇ ತರಗತಿ/ಐಟಿಐ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ನಾನ್ ಐಟಿಐ ಅಪ್ರೆಂಟಿಸ್ ವರ್ಗದ ಅಭ್ಯರ್ಥಿಗಳಿಗೆ – ₹8200
ಐಟಿಐ ಅಪ್ರೆಂಟಿಸ್ ವರ್ಗದ ಅಭ್ಯರ್ಥಿಗಳಿಗೆ – ₹9600
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹200
ಪ.ಜಾತಿ, ಪ.ಪಂಗಡ, ಮಹಿಳೆಯರು, ಪಿಡಬ್ಲ್ಯೂಬಿಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – ₹100
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
• ಅಧಿಕೃತ ಪೋರ್ಟಲ್ https://www.recruit-gov.com/Yantra2026/index.phpಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ನಮೂನೆಯ ವಿವರಗಳನ್ನು ನೀಡಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.recruit-gov.com |
| More Updates | KarnatakaHelp.in |